Tuesday, April 9, 2024

ಜ.27 ರಂದು ಉಚಿತ ಸಾಮೂಹಿಕ ವಿವಾಹ ಸಮಾರಂಭ : ಇಲ್ಲಿದೆ ವಿವರ

ಶ್ರೀ ನಿತ್ಯಾನಂದ ಗೋವಿಂದ ಸ್ವಾಮಿ ಮಂದಿರ ಟ್ರಸ್ಟ್(ರಿ) ನಿತ್ಯಾನಂದ ನಗರ, ಬೈಪಾಸ್ ರಸ್ತೆ, ಬಂಟ್ವಾಳ, ಇದರ ಸುವರ್ಣ ಮಹೋತ್ಸವ ವರ್ಷಾಚರಣೆಯ ಪ್ರಯುಕ್ತ, ನೂತನ ಮಂದಿರದ ಲೋಕಾರ್ಪಣೆ ಹಾಗೂ ಶ್ರೀ ಗುರುದ್ವಯರ ಪಂಚಲೋಹ ವಿಗ್ರಹದ ಪ್ರತಿಷ್ಠಾ ಮಹೋತ್ಸವದ ಶುಭ ಸಂದರ್ಭದಲ್ಲಿ ಮಂದಿರದ ವತಿಯಿಂದ 27.01.2023ನೇ ಶುಕ್ರವಾರ ಬೆಳಗ್ಗೆ 10:46ರ ಮೀನ ಲಗ್ನ ಸಮುಹೂರ್ತದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭವು ಜರುಗಲಿರುವುದು. ಈ ವಿವಾಹ ಸಮಾರಂಭದಲ್ಲಿ ವಿವಾಹವಾಗಲಿಚ್ಚಿಸುವ ಜೋಡಿಗಳು ದಿನಾಂಕ 30.11.2022ರ ಒಳಗೆ ತಮ್ಮ ಹೆಸರನ್ನು ನೋಂದಾಯಿಸಬೇಕು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ವಿ ಸೂ:
1. ಈ ಸಾಮೂಹಿಕ ವಿವಾಹ ಸಮಾರಂಭದಲ್ಲಿ ವಿವಾಹವಾಗಲು ಎಲ್ಲಾ ಜಾತಿ ವರ್ಗದ ಬಂಧುಗಳಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.
2. ವಿವಾಹವಾಗುವ ವರನಿಗೆ ಅಂಗಿ, ದೋತಿ, ಶಾಲು ಮತ್ತು ಪೇಟ ಹಾಗೂ ವಧುವಿಗೆ ಸೀರೆ, ರವಿಕೆ, ಚಿನ್ನದ ತಾಳಿ ಮತ್ತು ಬೆಳ್ಳಿ ಕಾಲುಂಗುರ ಉಚಿತವಾಗಿ ನೀಡಲಾಗುವುದು.
3. ಈ ವಿವಾಹ ಸಮಾರಂಭದಲ್ಲಿ ವಿವಾಹವಾಗುವ ವಧು-ವರರ ಜಂಟಿ ಖಾತೆಗೆ ರೂಪಾಯಿ 10,000ವನ್ನು ಜಮೆ ಮಾಡಲಾಗುವುದು.
4. ಆಸಕ್ತರು ವಾಸ್ತವ್ಯ ದೃಢ ಪತ್ರ, ಅವಿವಾಹಿತ ಆಗಿರುವ ಬಗ್ಗೆ ಸಂಬಧಪಟ್ಟ ಪಂಚಾಯಿತಿ ಅಥವಾ ಪುರಸಭೆಯ ದೃಢಪತ್ರ, ರೇಷನ್ ಕಾರ್ಡ್ ಜೆರಾಕ್ಸ್, ಆಧಾರ್ ಕಾರ್ಡ್ ಜೆರಾಕ್ಸ್, ಜನನ ಪ್ರಮಾಣ ಪತ್ರ ಅಥವಾ ಶಾಲಾ ಪ್ರಮಾಣ ಪತ್ರವನ್ನು ನೀಡುವುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ.

9964303506, 9880630882, 9448626078

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...