Thursday, April 11, 2024

ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ ಅವರಿಗೆ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ.

ಅಂತರಾಷ್ಟ್ರೀಯ ಪ್ರತಿಷ್ಠಿತ ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಅವರು ರಾಜ್ಯ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಯಕ್ಷರಂಗಭೂಮಿಯಲ್ಲಿ ಕಲಾವಿದನಾಗಿ ರಸಿಕರ ಮನರಂಜಿಸಿದ ಕಲಾಚೇತನ ಸರಪಾಡಿ ಅಶೋಕ ಶೆಟ್ಟಿ, ನಾಟ್ಯಗುರು, ಸಮರ್ಥ ಪಾತ್ರಧಾರಿ, ಯಕ್ಷಪ್ರಸಂಗಗಳ ರಚನಾಕಾರರು, ನಿರ್ದೇಶಕರು.

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಅಜಿಲಮೊಗರುನಲ್ಲಿ 1961ರಲ್ಲಿ ಜನಿಸಿದ ಅಶೋಕ ಶೆಟ್ಟಿ ಎಳವೆಯಿಂದಲೇ ಯಕ್ಷಪ್ರೇಮಿ. ಪ್ರೌಢಶಿಕ್ಷಣದವರೆಗಷ್ಟೇ ವ್ಯಾಸಂಗ. ಆನಂತರ ಕಲೆಯೇ ಜೀವನ, ಕಲೆಯೇ ಶಿಕ್ಷಣ. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪಡ್ರೆ ಚಂದು ಅವರಿಂದ ನಾಟ್ಯಾಭ್ಯಾಸ. ಉತ್ತಮ ನೃತ್ಯಪಟು, ಅರ್ಜುನ, ದೇವೇಂದ್ರ, ರಕ್ತಬೀಜ, ಕೌಂಡ್ಲಿಕ, ಶತ್ರುಘ್ನ, ಇಂದ್ರಜಿತು ಮುಂತಾದವು ಅಶೋಕಶೆಟ್ಟಿ ಅವರ ಕಲಾಭಿವ್ಯಕ್ತಿಯ ಜನಪ್ರಿಯ ಪಾತ್ರಗಳು. ಕಟೀಲು ಮೇಳ, ಅಳದಂಗಡಿ ಮೇಳ, ಬಪ್ಪನಾಡು ಮೇಳ, ಕದ್ರಿ ಮೇಳ, ಮಂಗಳಾದೇವಿ ಮೇಳ ಮುಂತಾದ ಮೇಳಗಳಲ್ಲಿ ಕಲಾವಿದ, ಸಂಚಾಲಕನಾಗಿ ಸಾರ್ಥಕ ಕಲಾಸೇವೆ. ಹೊಸ ತಲೆಮಾರಿನ ವಿದ್ಯಾರ್ಥಿಗಳಿಗೆ ಉಚಿತ ನಾಟ್ಯ ತರಬೇತಿ ನೀಡಿದ ಗುರು. ಸಾವಯವ ಕೃಷಿ ವಿಜಯ ಕುರಿತ ಆರು ಯಕ್ಷಗಾನ ಪ್ರಸಂಗಗಳ ರಚನೆ ಮತ್ತು ನಿರ್ದೇಶನ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಸೇವೆ. ಹತ್ತಾರು ಸಂಘಸಂಸ್ಥೆಗಳಲ್ಲಿ ನಿಸ್ವಾರ್ಥ ಕಾರ್ಯ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಗೌರವ ಸೇರಿದಂತೆ ಹಲವು ಸನ್ಮಾನಗಳಿಂದ ಭೂಷಿತ ಯಕ್ಷಪ್ರತಿಭೆ.

More from the blog

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...