Friday, April 5, 2024

ಲೊರೆಟ್ಟೊ ಮಾತಾ ಚರ್ಚ್ ನಲ್ಲಿ 12 ಮಕ್ಕಳಿಗೆ ಪರಮ ಪ್ರಸಾದ

ಲೊರೆಟ್ಟೊ ಮಾತಾ ಚರ್ಚ್ ನಲ್ಲಿ 12 ಮಕ್ಕಳಿಗೆ ಪರಮ ಪ್ರಸಾದ ನೀಡಲಾಯಿತು.

ಚರ್ಚ್ ಧರ್ಮಗುರು ವಂದನೀಯ ಸ್ವಾಮಿ ಫ್ರಾನ್ಸಿಸ್ ಕ್ರಾಸ್ತಾ ರವರು ಪ್ರಧಾನ ಧರ್ಮಗುರುಗಳಾಗಿ ಪವಿತ್ರ ಬಲಿ ಪೂಜೆಯನ್ನು ನೂರಾರು ಭಕ್ತಾದಿಗಳೊಂದಿಗೆ ಅರ್ಪಿಸಿ, ಮಕ್ಕಳಿಗೆ ಅವರ ತಂದೆ, ತಾಯಿಯವರೊಂದಿಗೆ ಪರಮ ಪ್ರಸಾದ ನೀಡಿ, ಆಶಿರ್ವಚಿಸಿದರು.

ವಂ. ಮೆಲ್ವಿನ್ ಡೆಸಾ ಬಲಿ ಪೂಜೆಯಲ್ಲಿ ಪಾತ್ರವಹಿಸಿದ್ದರು. ಲೊರೆಟ್ಟೊ ಅಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ವಂದನೀಯ ಸ್ವಾಮಿ ಜೇಸನ್ ಮೊನಿಸ್ ರವರು ದೇವರ ವಾಕ್ಯದ ಮೇಲೆ ಪ್ರವಚನ ನೀಡಿದರು. ಭಗಿನಿ ಇಡೊಲಿನ್, ಭಗಿನಿ ಅಗ್ನೆಸ್, ಭಗಿನಿ ಹೆಲೆನ್ ಮಕ್ಕಳಿಗೆ ತರಬೇತಿ ನೀಡಿದರು. ಚರ್ಚ್ ಪಾಲನಾ ಮಂಡಳಿ ವತಿಯಿಂದ ಪರಮ ಪ್ರಸಾದ ಪಡೆದ ಮಕ್ಕಳನ್ನು ಸನ್ಮಾನಿಸಲಾಯಿತು

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...