Wednesday, April 10, 2024

ಕಾಶೀ ಮಠಾಧೀಶರ ಸಂಭ್ರಮದ ದಿಗ್ವಿಜಯ ಮಹೋತ್ಸವ 

ಮಂಗಳೂರು: ನಗರದ ವೆಂಕಟ್ರಮಣ ದೇವಸ್ಥಾನದಲ್ಲಿ ಚಾತುರ್ಮಾಸ ವೃತದಲ್ಲಿರುವ ಕಾಶೀಮಠ ಸಂಸ್ಥಾನದ ಮಠಾಧೀಶರಾದ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿಗ್ವಿಜಯ ಮಹೋತ್ಸವ ಕಾರ್ಯಕ್ರಮ ಶನಿವಾರ ವೈಭವದಿಂದ ನಡೆಯಿತು. ಈ ಅಪೂರ್ವ ಕ್ಷಣಕ್ಕೆ ದೇಶದ ನಾನಾ ಕಡೆಯಿಂದ ಆಗಮಿಸಿದ ಸಹಸ್ರ ಸಂಖ್ಯೆಯ ಭಕ್ತಾದಿಗಳು ಸಾಕ್ಷಿಯಾದರು.

ರಥಬೀದಿ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಚಾತುರ್ಮಾಸ್ಯ ಮೆರವಣಿಗೆ ಆರಂಭಗೊಂಡು ಮಹಾಮ್ಮಾಯ ದೇವಸ್ಥಾನ ರಸ್ತೆ, ಗದ್ದೆಕೇರಿ, ಮಂಜೇಶ್ವರ ಗೋವಿಂದ ಪೈವೃತ್ತ, ಅಮ್ಮೆಂಬಳ ಸುಬ್ಬರಾವ್ ಪೈ ರಸ್ತೆ, ಡೊಂಗರಕೇರಿ, ನ್ಯೂಚಿತ್ರ ಜಂಕ್ಷನ್, ಬಸವನಗುಡಿ ರಸ್ತೆ, ಚಮ್ಮಾರಗಲ್ಲಿ, ಕೆಳರಥಬೀದಿ, ರಥಬೀದಿಯಾಗಿ ವೆಂಕಟ್ರಮಣ ದೇವಸ್ಥಾನದ ಬಳಿ ಸಮಾಪನಗೊಂಡಿತು. ವೈಭವದ ಮೆರವಣಿಗೆಗೆ ಗಜಪಡೆ, ಅಶ್ವಪಡೆ, ಸ್ಯಾಕ್ಸೋಪೋನ್ ತಂಡ, ಪಂಚ ವಾದ್ಯ, ಚೆಂಡೆವಾದನ, ಆಕರ್ಷಕ ನ್ಯಾಸಿಕ್ ಬ್ಯಾಂಡ್ ತಂಡ, ತಾಲೀಮು, ಹುಲಿವೇಷ, ತಂಡಗಳು, ಸ್ತಬ್ಧಚಿತ್ರಗಳು ಸೇರಿದಂತೆ ಸಾಂಸ್ಕೃತಿಕ ಕಲಾ ತಂಡಗಳು ಶೋಭೆ ನೀಡಿದವು.

ಮೆರವಣಿಗೆ ಸಾಗುವ ಹಾದಿಯಲ್ಲಿ ಬರುವ ಮನೆಯವರು ದೀಪ, ತೋರಣಗಳಿಂದ ಬೀದಿಯನ್ನು ಅಲಂಕರಿಸಿದರು. ಮೆರವಣಿಗೆ ಸಾಗುವ ಹಾದಿಯಲ್ಲಿ ಸಮಾಜ ಬಂಧುಗಳು ಗುರುಗಳಿಂದ ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು.

ಈ ಸಂದರ್ಭದಲ್ಲಿ ಶ್ರೀ ದೇವಳದ ಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ, ಕಿರಣ್ ಪೈ, ಸತೀಶ್ ಪ್ರಭು, ಗಣೇಶ್ ಕಾಮತ್, ಜಗನ್ನಾಥ್ ಕಾಮತ್, ಚಾತುರ್ಮಾಸ ಸಮಿತಿಯ ಅಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್, ಪದ್ಮನಾಭ ಪೈ, ಸಿ . ಎಲ್ಜ ಶೆಣೈ, ಜಯರಾಜ್ ಪೈ, ಪ್ರಶಾಂತ್ ರಾವ್, ಡಾ . ಉಮಾನಂದ ಮಲ್ಯ, ನಾ ಮದೇವ್ ಮಲ್ಯ, ಸುರೇಶ್ ವಿ ಕಾಮತ್, ಗಣಪತಿ ಪೈ, ಗುರುದತ್ ಕಾಮತ್, ಬಿ ಆರ್ ಭಟ್, ಮಾರೂರ್ ಶಶಿಧರ್ ಪೈ, ಶಾಸಕ ಡಿ . ವೇದವ್ಯಾಸ್ ಕಾಮತ್, ಕೊಚ್ಚಿನ್ ತಿರುಮಲ ದೇವಳದ ಜಗನ್ನಾಥ್ ಶೆಣೈ, ಜಿ ಎಸ್ ಬಿ ಸೇವಾಮಂಡಲದ ಆರ್ . ಜಿ . ಭಟ್, ರಘುವೀರ್ ಭಂಡಾರ್ಕರ್, ದಿನೇಶ್ ಕಾಮತ್ ಕೋಟೇಶ್ವರ ಹಾಗೂ ಸಹಸ್ರಾರು ಭಜಕರು ಉಪಸ್ಥಿತರಿದ್ದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...