Monday, April 8, 2024

ಶಾಸಕ ಹರೀಶ್ ಪೂಂಜಾ ರವರ ಮೇಲೆ ಹತ್ಯೆಗೆ ಸಂಚು: ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಮನವಿ

ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಅವರ ಮೇಲೆ ಕೊಲೆ ಯತ್ನ ಮಾಡಿದ ಘಟನೆಯ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಬಂಟ್ವಾಳ ತಾಲೂಕು ವಿಶ್ವಹಿಂದೂಪರಿಷತ್ ಹಾಗೂ ಭಜರಂಗದಳ ಸಂಘಟನೆಯ ವತಿಯಿಂದ ಬಂಟ್ವಾಳ ತಹಶಿಲ್ದಾರ್ ಸ್ಮಿತಾರಾಮು ಅವರಿಗೆ ಮನವಿ ಮಾಡಿದರು.

ಅ. 13 ರಂದು ಬಂಟ್ವಾಳ ತಾಲೂಕು, ಪುದು ಗ್ರಾಮ‌ಪಂಚಾಯತ್ ವ್ಯಾಪ್ತಿಯಲ್ಲಿ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾರವರ ಮೇಲೆ ಕೊಲೆ ಯತ್ನ ವಿಚಾರದ ಬಗ್ಗೆ ಈಗಾಗಲೇ ಆರೋಪಿಯನ್ನು ಪೊಲೀಸರು ಬಂಧಿಸಿ , ತನಿಖೆ ನಡೆಯುತ್ತಿದ್ದು,ವಿಚಾರವನ್ನು ಕೂಲಕುಂಶವಾಗಿ ಪರಿಶೀಲಿಸಿದಾಗ ಶಾಸಕ ಹರೀಶ್ ಪೂಂಜಾರನ್ನು ಕೊಲೆ ನಡೆಸುವ ಉದ್ದೇಶವಾಗಿತ್ತು ಎಂಬ ವಿಚಾರ ಬೆಳಕಿಗೆ ಬಂದಿದೆ.ಹರೀಶ್, ಪೂಂಜಾರವರು ಹಿಂದೂ ವಿಚಾರದಲ್ಲಿ ನೇರ ನಡೆ ನುಡಿಯಿಂದ ನಡೆದುಕೊಳ್ಳುತ್ತಿರುವ ಬಗ್ಗೆ ಕುಪಿತಗೊಂಡಿರುವ ವ್ಯಕ್ತಿಗಳಾಗಿರಬಹುದೆಂದು ಮೇಲ್ನೋಟಕ್ಕೆ ಸಾಬೀತಾಗುತ್ತಿದೆ.

 

ಈ ಕೃತ್ಯ ಕೇವಲ ಒಂದು ವ್ಯಕ್ತಿಯಿಂದ ನಡೆಯಲು ಸಾಧ್ಯವಿರುವುದಿಲ್ಲ ಇದರ ಹಿಂದೆ ಭಯೋತ್ಪಾದಕ ಸಂಘಟನೆಯ ನಂಟು ಇರುವುದು ಗೋಚರವಾಗುತ್ತಿದೆ.

ಈಗಾಗಲೇ ತಿಳಿದು ಬಂದಿರುವ ಅಂಕಿ ಅಂಶದ ಪ್ರಕಾರ ಪುದು ಗ್ರಾಮದ ವ್ಯಾಪ್ತಿಯಲ್ಲಿ ಸಾವಿರಾರು ಜನ ಅಪರಿಚಿತ ಮುಸ್ಲಿಂ ಸಮುದಾಯದ ವ್ಯಕ್ತಿಗಳು ದೇಶದ ವಿವಿಧ ಭಾಗಗಳಿಂದ ವಿಶೇಷವಾಗಿ ಕೇರಳ ಪ್ರದೇಶದಿಂದ ಬಂದು ಬಾಡಿಗೆ ಮನೆ ಮಾಡಿ ವಾಸಿಸುತ್ತಿರುವುದು ಕುಡುಬಂದಿರುತ್ತದೆ. ಸಭೆ, ವ್ಯಕ್ತಿಗಳು, ನಿರಂತವಾಗಿ ಪರಿಸರದ ಯುವಕರನ್ನು ಭಯೋತ್ಪಾದನ ಕೃತ್ಯಗಳಿಗೆ ಪ್ರೇರೇಪಿಸಿ ತರಭೇತಿ ನೀಡುತ್ತಿರುವುದು ಈಗಾಗಲೇ ನಿರ್ಭಂಧಕ್ಕೊಳಪಟ್ಟಿರುವ ಪಾಪ್ಯೂಲರ್ ಫಂಟ್ ಆಫ್ ಇಂಡಿಯಾ ಸಂಸ್ಥೆಯ ಸದಸ್ಯರುಗಳ ಬಂಧನದಿಂದ ಸ್ಪಷ್ಟವಾಗಿರುತ್ತದೆ. ಈ ರೀತಿಯ ವ್ಯಕ್ತಿಗಳು ನಡೆಸುತ್ತಿರುವ ಕಾನೂನು ಬಾಹಿರ ಕೃತ್ಯಗಳಿಗೆ ಸ್ಥಳೀಯ ವ್ಯಕ್ತಿಗಳ ಸಹಕಾರ, ಕೂಡಾ ಇರುತ್ತದೆ. ಈ ರೀತಿ ಇದು ಗ್ರಾಮ ಕೇಂದ್ರವಾಗಿರುವ ಸಮಾಜ ದ್ರೋಹಿ ಶಕ್ತಿಗಳ ಚಟುವಟಿಕೆಗಳನ್ನು ಅಮೂಲಾಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಮೂಲಕ ಸಮಾಜದ ಸಮಾಜದಲ್ಲಿ ಸುವ್ಯವಸ್ಥೆಯನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ ತಾಲೂಕು ಅಧ್ಯಕ್ಷ ನ್ಯಾಯವಾದಿ ಪ್ರಸಾದ್ ಕುಮಾರ್ ರೈ , ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ಅಧ್ಯಕ್ಷರಾದ ಪ್ರಸಾದ್ ಕುಮಾರ್ ರೈ,ಬಜರಂಗದಳ ಜಿಲ್ಲಾ ಸಹ ಸಂಚಾಲಕ ಗುರುರಾಜ್ ಬಂಟ್ವಾಳ, ಬಜರಂಗದಳ ಪ್ರಖಂಡ ಸಂಚಾಲಕ ಶಿವಪ್ರಸಾದ್ ತುಂಬೆ,ಪ್ರಖಂಡ ಕಾರ್ಯದರ್ಶಿ ದೀಪಕ್ ಅಜಕಲ, ಸಹ ಸಂಚಾಲಕ ಸಂತೋಷ್ ಸರಪಾಡಿ, ಸೇವಾ ಪ್ರಮುಖ್ ಪ್ರಸಾದ್ ಬೆಂಜನಪದವು, ಜಯ ಹೊಸ್ಮಾರ್,ರಂಜಿತ್ ತಲೆಂಬಿಲ, ವಿನೀತ್ ನಿತ್ಯಾನಂದ ನಗರ,ಪೃಥ್ವಿ ರಾಜ್ ಬಡಗುಂಡಿ,ಚಂದ್ರಹಾಸ ಕಾಯರ್ಮಾರ್,ಶರತ್ ನಿತ್ಯಾನಂದ ನಗರ, ಹರೀಶ್ ನಿತ್ಯಾನಂದ ನಗರ,ರತೀಶ್ ನಿತ್ಯಾನಂದ ನಗರ ಮತ್ತಿತರರು ಉಪಸ್ಥಿತರಿದ್ದರು.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...