Thursday, April 11, 2024

ಅಶಕ್ತ ಕುಟುಂಬಕ್ಕೆ ಧನದ ರೂಪದಲ್ಲಿ ಮತ್ತು ಮಕ್ಕಳಿಗೆ ಪುಸ್ತಕ ವಿತರಿಸುವ ಮೂಲಕ ಸಾರ್ಥಕತೆ ಮೆರೆದ ಬಿರುವೆರ್ ಫ್ರೆಂಡ್ಸ್ ಮತ್ತು ಮಹಾಮ್ಮಾಯಿ ಫ್ರೆಂಡ್ಸ್ ಮಂಡಾಡಿ ತಂಡ

ಬಿರುವೆರ್ ಫ್ರೆಂಡ್ಸ್ ಮಂಡಾಡಿ ಮತ್ತು ಮಹಾಮ್ಮಾಯಿ ಫ್ರೆಂಡ್ಸ್ ಮಂಡಾಡಿ ಇವರ ಸಹಭಾಗಿತ್ವದಲ್ಲಿ ನವರಾತ್ರಿಯ ಶಾರದಾ ಶೋಭಾಯಾತ್ರೆಗೆ ಹುಲಿವೇಶದ ಸ್ತಬ್ಧ ಚಿತ್ರ ಪ್ರದರ್ಶನ ನೀಡಲಾಗಿದ್ದು, ಈ ವೇಳೆ
ಸಂಗ್ರಹವಾದ ಹಣವನ್ನು ಅಶಕ್ತ ಕುಟುಂಬಗಳಿಗೆ ಧನದ ರೂಪದಲ್ಲಿ, ಮತ್ತು ಮಕ್ಕಳಿಗೆ ಪುಸ್ತಕದ ರೂಪದಲ್ಲಿ ವಿತರಿಸಲಾಯಿತು.

ಅರ್ಬಿಗುಡ್ಡೆ ನಿವಾಸಿಗಳಾದ ಲೋಕೇಶ ಮತ್ತು ಭವಾನಿ ಅವರ ಪುತ್ರ ಆಯುಷ್ ಎಂಬ ಬಾಲಕನ ವೈದ್ಯಕೀಯ ಚಿಕಿತ್ಸೆಗಾಗಿ ನೆರವನ್ನು ಸಂಸ್ಥೆಯ ಪದಾಧಿಕಾರಿಗಳ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

ಸರಕಾರಿ ಪ್ರೌಢಶಾಲೆ ಕೊಯಿಲ ಬಂಟ್ವಾಳ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆಯನ್ನು ಶ್ರೀ ದುರ್ಗಾಂಬಾ ಮಂದಿರ, ಬಿರುವೆರ್ ಫ್ರೆಂಡ್ಸ್ ಮಂಡಾಡಿ, ಮಹಮ್ಮಾಯಿ ಫ್ರೆಂಡ್ಸ್, ಸಹ ಭಾಗಿತ್ವದಲ್ಲಿ ವಿತರಿಸಲಾಯಿತು.

ಬಳಿಕ ಮಕ್ಕಳಿಗೆ ಸಿಹಿತಿಂಡಿ ಹಂಚಿ ಮಂದಿರದ ಅರ್ಚಕರಾದ ಪ್ರಶಾಂತ್ ಭಟ್ ರವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಶಾಲಾ ಮುಖ್ಯೋಪಾಧ್ಯಾಯರು, ಸಹೋದ್ಯೋಗಿಗಳು, ಬಿರುವೆರ್ ಫ್ರೆಂಡ್ಸ್ ಮಂಡಾಡಿಯ ಕಾರ್ಯದರ್ಶಿ ಅನಿಲ ಪೂಜಾರಿ ಮಂಡಾಡಿ, ಮಹಾಮ್ಮಾಯಿ ಫ್ರೆಂಡ್ಸ್ ನ ಕಾರ್ಯದರ್ಶಿ ಹರೀಶ್, ಪ್ರಶಾಂತ್, ರತೀಶ್, ಕಿರಣ್ , ಸಂತೋಷ್ ಸಾಕ್ಷಿಯಾದರು..

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...