Thursday, April 11, 2024

ಖಾವಂದರ ದೂರದೃಷ್ಟಿಯಿಂದ ಆರಂಭಗೊಂಡ ಗ್ರಾಮಾಭಿವೃದ್ಧಿ ಯೋಜನೆಯ ಸಮಾಜಮುಖಿ ಕಾರ್ಯಗಳು ಪುಣ್ಯದ ಕೆಲಸ-ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಗ್ರಾಮಗಳು ರಾಮರಾಜ್ಯವಾಗಬೇಕು ಎಂಬ ಮಹಾತ್ಮ ಗಾಂಧಿ ಅವರ ಕನಸಿಗೆ ವ್ಯಸನಮುಕ್ತ ದೇಶ ನಿರ್ಮಾಣದ ಕಲ್ಪನೆಗೆ ಪೂರಕವಾಗಿ ಪೂಜ್ಯ ಖಾವಂದರ ದೂರದೃಷ್ಟಿಯೊಂದಿಗೆ ಆರಂಭಗೊಂಡ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜನಜಾಗೃತಿ ವೇದಿಕೆಯ ಸಮಾಜಮುಖಿ ಕಾರ್ಯಕ್ರಮಗಳು ಪುಣ್ಯದ ಕೆಲಸವಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಅವರು ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬಂಟ್ವಾಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ವತಿಯಿಂದ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ನವಜೀವನ ಸದಸ್ಯರ ಸಮಾವೇಶ ಮತ್ತು ಕೇಂದ್ರ ಒಕ್ಕೂಟಗಳ ಪದಗ್ರಹಣ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮದ್ಯವ್ಯಸನ ಚಟಕ್ಕೆ ಬಿದ್ದು ಅನೇಕ ವ್ಯಕ್ತಿಗಳ ಜೀವನವನ್ನು ಬದಲಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಇತರರಿಗೆ ಮಾದರಿ ಕಾರ್ಯ ಎಂದರು.

ಮಾಜಿ ಸಚಿವ ರಮಾನಾಥ ರೈ ಅವರು ಮಾತನಾಡಿ, ಮದ್ಯವ್ಯಸನಿಗಳ ಸಂಖ್ಯೆಯನ್ನು ಕಡಿಮೆ ಮಾಡುವ ದೃಷ್ಟಿಯಿಂದ ಪೂಜ್ಯ ಖಾವಂದರು ನಡೆಸಿರುವ ಎಲ್ಲಾ ಪ್ರಯತ್ನಗಳು ಯಶಸ್ವಿಯಾಗಿರುವುದು ಹೆಮ್ಮೆ ಪಡಬೇಕಾದ ವಿಚಾರ. ಗಾಂಽಯವರ ನೆನಪಿಗಾಗಿ ಇಡೀ ಜಗತ್ತು ಅಹಿಂಸಾ ದಿನವನ್ನು ಆಚರಿಸುತ್ತಿದ್ದು, ಆದರೆ ಭಾರತದಲ್ಲಿ ಕೆಲವರು ಅವರನ್ನು ದೂಷಿಸುತ್ತಿರುವುದು ದುರಾದೃಷ್ಟ ಎಂದರು.

ಬಂಟ್ವಾಳ ಜನಜಾಗೃತಿ ವೇದಿಕೆಯ ಅಧ್ಯಕ್ಷ ರೊನಾಲ್ಡ್ ಡಿಸೋಜ ಅಧ್ಯಕ್ಷತೆ ವಹಿಸಿದ್ದರು. ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಅವರು ಕೇಂದ್ರ ಒಕ್ಕೂಟದವರಿಗೆ ಜವಾಬ್ದಾರಿ ಹಸ್ತಾಂತರಿಸಿದರು.

ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಎ.ರುಕ್ಮಯ ಪೂಜಾರಿ, ಕೈಯೂರು ನಾರಾಯಣ ಭಟ್, ಕಿರಣ್ ಹೆಗ್ಡೆ, ಬಾಲಕೃಷ್ಣ ಆಳ್ವ, ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೃಷ್ಣಕುಮಾರ್ ಪೂಂಜ, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ| ತುಕರಾಮ ಪೂಜಾರಿ, ಕೇಂದ್ರ ಒಕ್ಕೂಟದ ಮಾಜಿ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಅಲ್ಲಿಪಾದೆ, ಚಂದಪ್ಪ ಮೂಲ್ಯ, ಸದಾನಂದ ನಾವೂರು, ಲಯನ್ಸ್ ಮಾಜಿ ಅಧ್ಯಕ್ಷ ಡಾ| ವಸಂತ ಬಾಳಿಗಾ, ಕೇಂದ್ರ ಒಕ್ಕೂಟದ ನೂತನ ಅಧ್ಯಕ್ಷ ಚಿದಾನಂದ ರೈ ಕಕ್ಯ, ಕೇಂದ್ರ ಒಕ್ಕೂಟದ ನಿರ್ಗಮನ ಅಧ್ಯಕ್ಷ ಮಾಧವ ವಳವೂರು ಉಪಸ್ಥಿತರಿದ್ದರು.

ಬಂಟ್ವಾಳ ಯೋಜನಾಧಿಕಾರಿ ಜಯಾನಂದ ಪಿ. ಸ್ವಾಗತಿಸಿ, ವಿಟ್ಲ ಯೋಜನಾಧಿಕಾರಿ ಚೆನ್ನಪ್ಪ ಗೌಡ ವಂದಿಸಿದರು. ಮೇಲ್ವಿಚಾರಕರಾದ ಶಿವರಂಜನ್ ಹಾಗೂ ಅಶ್ವಿನಿ ಕಾರ್ಯಕ್ರಮ ನಿರ್ವಹಿಸಿದರು.

More from the blog

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...