Monday, April 8, 2024

ಶಾಸಕ ಹರೀಶ್ ಪೂಂಜ ಬೆದರಿಕೆ ಪ್ರಕರಣ ; ಸಿಐಡಿ ತನಿಖೆ ಆರಂಭ

ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಕಾರನ್ನು ಅಡ್ಡಗಟ್ಟಿ ಬೆದರಿಕೆಯೊಡ್ಡಿದ ಪ್ರಕರಣವನ್ನು ರಾಜ್ಯ ಸರಕಾರ ‌ಸಿಐಡಿಗೆ ಹಸ್ತಾಂತರಿಸಿದ್ದು, ಸಿಐಡಿ ಇನ್ಸ್‌ಪೆಕ್ಟರ್ ಶಿವರಾಜ್ ಅವರು ತನಿಖೆ ಆರಂಭಿಸಿದ್ದಾರೆ.

ಅ. 18 ರಂದು ಬಂಟ್ವಾಳ ಗ್ರಾಮಾಂತರ ಪಿಎಸ್ಐ ಹರೀಶ್ ಅವರು ಪ್ರಕರಣ ಕಡತವನ್ನು ಬೆಂಗಳೂರು ಸಿಐಡಿ ಕಚೇರಿಗೆ ಹಸ್ತಾಂತರಿಸಿದ್ದರು. ಕಡತ ಹಸ್ತಾಂತರದ ಬೆನ್ನಲ್ಲೇ ಪೊಲೀಸ್ ಇನ್ಸ್‌ಪೆಕ್ಟರ್, ಪಿಎಸ್ಐ ಹಾಗೂ ಇಬ್ಬರು ಸಿಬಂದಿಯನ್ನು ಒಳಗೊಂಡ ತಂಡ ಬಂಟ್ವಾಳಕ್ಕೆ ಆಗಮಿಸಿದ್ದು, ಕಡತಗಳ ಪರಿಶೀಲನೆಯ ಮೂಲಕ ತನಿಖೆ ಆರಂಭಿಸಿದ್ದಾರೆ.

More from the blog

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...