Thursday, April 18, 2024

ಕರ್ನಾಟಕ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಪ್ರಸನ್ನ ಬಿ.ವರಾಳೆ ನೇಮಕ

ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ನ್ಯಾ.ಪ್ರಸನ್ನ ಬಿ.ವರಾಳೆ ಅವರನ್ನು ಕರ್ನಾಟಕದ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

1962 ಜೂನ್ 23ರಂದು ಜನಿಸಿದ ನ್ಯಾ.ಪ್ರಸನ್ನ ಬಿ.ವರಾಳೆ ಅವರು 1985ರ ಆಗಸ್ಟ್ 12 ರಂದು ವಕೀಲರಾಗಿ ದಾಖಲಾದರು, ಅವರು 1990ರಿಂದ 1992ರವರೆಗೆ ಔರಂಗಾಬಾದ್​ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಕಾನೂನು ಉಪನ್ಯಾಸಕರಾಗಿ ಮತ್ತು ಸಹಾಯ ಸರ್ಕಾರಿ ಮತ್ತು ಹೆಚ್ಚುವರಿ ಸರ್ಕಾರಿ ಅಭಿಯೋಜಕರಾಗಿ, ಹೈಕೋರ್ಟ್ ಪೀಠಿದಲ್ಲಿ ಸೇವೆ ಸಲ್ಲಿಸಿದ್ದಾರೆ. ಔರರಂಗಾಬಾದ್ ಮತ್ತು ಭಾರತದ ಒಕ್ಕೂಟಕ್ಕೆ ಹೆಚ್ಚುವರಿ ಸ್ಥಾಯಿ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ.

ಇನ್ನು ಕೊಲಿಜಿಯಂ ಸೆಪ್ಟೆಂಬರ್ 28 ರಂದು ನ್ಯಾಯಮೂರ್ತಿ ವರಾಳೆ ಅವರ ಉನ್ನತಿ ಶಿಫಾರಸು ಮಾಡಿತ್ತು.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಜಿಲ್ಲೆಯಲ್ಲಿ ಜೆ.ಡಿ.ಎಸ್.ಪಕ್ಷ ನಿಷ್ಕ್ರಿಯವಾಗಲು ಕಾರಣರಾದ ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡರು ರಾಜೀನಾಮೆ ನೀಡುವಂತೆ ಒತ್ತಾಯ

ಜೆ.ಡಿ.ಎಸ್.ಪಕ್ಷ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಲು ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡ ಅವರೇ ಕಾರಣರಾಗಿದ್ದು, ನೈತಿಕ ಹೊಣೆ ಹೊತ್ತು ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಮುಖಂಡ ಅಬುಬಕ್ಕರ್ ಅಮ್ಮಂಜೆ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅಧ್ಯಕ್ಷ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...