Thursday, April 11, 2024

ಶಾಲೆಯಲ್ಲಿ ಪೆಂಡಾಲ್ ಕುಸಿತ ಪ್ರಕರಣ : ಆರು ಮಂದಿ ಅರೆಸ್ಟ್

ಕಾಸರಗೋಡು: ಮಂಜೇಶ್ವರ ಉಪ ಜಿಲ್ಲಾ ವಿಜ್ಞಾನ ಮೇಳ ನಡೆಯುತ್ತಿದ್ದ ಸಂದರ್ಭದಲ್ಲಿ ಚಪ್ಪರ ಕುಸಿದು 59 ಮಂದಿ ಗಾಯ ಗೊಂಡ ಘಟನೆಗೆ ಸಂಬಂಧಪಟ್ಟಂತೆ ಆರು ಮಂದಿ ಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಚಪ್ಪರದ ಗುತ್ತಿಗೆ ದಾರ ಗೋಕುಲ್ ದಾಸ್, ಅಹಮ್ಮದಾಲಿ ಎ. ಪಿ , ಅಬ್ದುಲ್ ಬಶೀರ್, ಅಬ್ದುಲ್ ಶಾಮಿಲ್, ಇಲ್ಯಾಸ್ ಮುಹಮ್ಮದ್ ಮತ್ತು ಅಶ್ರಫ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.

ನಿನ್ನೆ ಮಧ್ಯಾಹ್ನ ಬೇಕೂರು ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಕಾರ್ಯಕ್ರಮ ನಡೆಯುತ್ತಿದ್ದಾಗಲೇ ಪೆಂಡಾಲ್ ಕುಸಿದು ಬಿದ್ದಿತ್ತು. ಅನೇಕ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ತೀರ್ಪುಗಾರರು ಸೇರಿದಂತೆ ಗಾಯಗೊಂಡಿದ್ದರು.

ಘಟನೆ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಕೇರಳ ಶಿಕ್ಷಣ ಸಚಿವ ಶಿವನ್ ಕುಟ್ಟಿ ಆದೇಶ ನೀಡಿದ್ದಾರೆ.
ಇವರ ವಿರುದ್ಧ ಜುವೈನಲ್ ಕಾಯ್ದೆ ಸೇರಿದಂತೆ ಹಲವು ಮೊಕದ್ದಮೆ ದಾಖಲಿಸಲಾಗಿದೆ.

ಗಾಯಗೊಂಡು ಮಂಗಳೂರು ಹಾಗೂ ಕಾಸರಗೋಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ 15 ಮಂದಿ ಚೇತರಿಸಿಕೊಳ್ಳುತ್ತಿದ್ದು, ಉಳಿದವರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...