Wednesday, April 17, 2024

ಬಂಟ್ವಾಳ ತಾಲೂಕು ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

ಬಂಟ್ವಾಳ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಇಂದು ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆಯನ್ನು ಆಚರಿಸಲಾಯಿತು.

ಉಪತಹಸೀಲ್ದಾರ್ ರಾಜೇಶ್ ನಾಯ್ಕ್ ಅವರು ಅಧ್ಯಕ್ಷತೆ ವಹಿಸಿ ದೀಪ ಪ್ರಜ್ವಲಿಸಿ ಕಿತ್ತೂರು ರಾಣಿ ಚೆನ್ನಮ್ಮ ಎಳೆ ವಯಸ್ಸಿನಲ್ಲೇ ಕುದುರೆ ಸವಾರಿ, ಕತ್ತಿವರಸೆ, ಮತ್ತು ಬಿಲ್ಲುಗಾರಿಕೆಯಲ್ಲಿ ತರಬೇತಿ ಪಡೆದಿದ್ದರು. ಬ್ರಿಟಿಷರು ಅಪಾರ ಸೈನ್ಯದೊಂದಿಗೆ ಮುತ್ತಿಗೆ ಹಾಕಿ ಕಿತ್ತೂರಿನ ಮೇಲೆ ದಾಳಿ ಮಾಡಿದಾಗ ದಿಟ್ಟತನದಿಂದ ಅವರನ್ನು ಎದುರಿಸಿ ತಮ್ಮ ಶೌರ್ಯ ಮೆರೆದರು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

ತಾಲೂಕು ಚುನಾವಣೆ ಶಾಖೆಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಾಯಕ ನಾರಾಯಣ ಗೌಡ ಸ್ವಾಗತಿಸಿ ವಂದಿಸಿದರು.

More from the blog

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಪುಣಚ: ಸೇತುವೆ ಕುಸಿತ ಪ್ರಕರಣ : ಗುತ್ತಿಗೆದಾರರ ವಿರುದ್ದ ಪ್ರಕರಣ

ವಿಟ್ಲ: ವಿಟ್ಲದ ಪುಣಚ ಗ್ರಾಮದ ಬರೆಂಜಾ - ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆ ಕುಸಿದುಬಿದ್ದ ಅವಘಡದಲ್ಲಿ ಗಾಯಗೊಂಡ ಏಳು ಮಂದಿ ಕಾರ್ಮಿಕರು ಆಸ್ಪತ್ರೆಗಳಲ್ಲಿ ಚೇತರಿಸುತ್ತಿದ್ದಾರೆ. ಇನ್ನೊಂದೆಡೆ ಈ ಪ್ರಕರಣಕ್ಕೆ...