Saturday, April 6, 2024

ಶ್ರೀರಾಮ ಪ್ರೌಢಶಾಲೆಯಲ್ಲಿ ಬಾಲಿಕಾ ಶಿಬಿರ

ಶ್ರೀ ರಾಮ ಪ್ರೌಢಶಾಲೆಯಲ್ಲಿ ನಡೆದ ಬಾಲಿಕಾ ಶಿಬಿರವನ್ನು ಮಂಗಳೂರಿನ ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್ ಆಗಿರುವ ಗೀತಾಕುಲಕರ್ಣಿ ದೀಪ ಪ್ರಜ್ವಲನ ಮಾಡುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ.ಪ್ರಭಾಕರ ಭಟ್ ಕಲ್ಲಡ್ಕ ಇವರು ಶಿಬಿರಾರ್ಥಿಗಳಿಗೆ ಶುಭಹಾರೈಸಿದರು.
ವೇದಿಕೆಯಲ್ಲಿ ರಾಷ್ಟç ಸೇವಿಕಾ ಸಮಿತಿ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯರು ಆಗಿರುವ ಕಮಲಾ ಪ್ರಭಾಕರ ಭಟ್, ಶ್ರೀರಾಮ ವಿದ್ಯಾಕೇಂದ್ರದ ಸಹಸಂಚಾಲಕರಾದ ರಮೇಶ್ ಎನ್, ಪ್ರೌಢಶಾಲೆಯ ಆಡಳಿತಾಧಿಕಾರಿಯಾದ ಶಾಂಭವಿ, ಮುಖ್ಯೋಪಾಧ್ಯಾಯರಾದ ಗೋಪಾಲ.ಎಂ ಹಾಗೂ ಸೆಕೆಂಡರಿ ಸ್ಕೂಲ್‌ನ ಉಪಪ್ರಾಂಶುಪಾಲರಾದ ತಿರುಮಲೇಶ್ವರ ಪ್ರಶಾಂತ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ದೀಕ್ಷಾ ಮಾತಾಜಿ ನಿರೂಪಿಸಿ, ಗಾಯತ್ರಿ ಮಾತಾಜಿ ಸ್ವಾಗತಿಸಿ, ಸುಮಿತ್ರಾ ಮಾತಾಜಿ ವಂದಿಸಿದರು.

 

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...