


ಪುತ್ತೂರು: ಗಾಂಜಾ ನಶೆಯಲ್ಲಿಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ ಶ್ರೀಕಾಂತ್ ರಾಥೋಡ್ ಅವರು ಬಂಧಿಸಿದ ಘಟನೆ ನಡೆದಿದೆ.
ಕಬಕ ಗ್ರಾಮದ ಕಲ್ಲಂದಡ್ಕ ನಿವಾಸಿ ಉಮ್ಮರ್ ಫಾರೂಖ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.
ಕಬಕ ಗ್ರಾಮದ ಪೋಳ್ಯ ಸಾರ್ವಜನಿಕ ಬಸ್ ತಂಗುದಾಣದಲ್ಲಿ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸುತ್ತ ಸಾರ್ವಜನಿಕರನ್ನು ಉದ್ದೇಶಿಸಿ ಹೀನಾಯವಾಗಿ ಮಾತನಾಡುತ್ತಾ ತೊಂದರೆ ನೀಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೆರೆಗೆ ಎಸ್.ಐ ಶ್ರೀಕಾಂತ್ ರಾಥೋಡ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ತೆರಳಿದ್ದಾರೆ. ಈ ವೇಳೆ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆತ ಮಾದಕ ವಸ್ತು ಸೇವಿಸಿದ ಕುರಿತು ಸಂಶಯದ ಮೇರೆಗೆ ಆತನನ್ನು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ವೈದ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿದ್ದಾರೆ.
ಆದ್ರೆ ಆತ ಗಾಂಜಾ ಸೇವಿಸಿರುವ ಕುರಿತು ವೈದ್ಯಾಧಿಕಾರಿಗಳು ದೃಢಪತ್ರ ನೀಡಿದ್ದಾರೆ. ಹಾಗಾಗಿ ಆರೋಪಿ ಉಮ್ಮರ್ ಫಾರೂಖ್ ಅವರ ವಿರುದ್ದ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


