Sunday, April 7, 2024

ವೃದ್ಧನ ಕೈಯಿಂದ ಹಣದ ಚೀಲ ಎಗರಿಸಲು ಯತ್ನ : ಮಹಿಳೆಯರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆ

ಪುತ್ತೂರು: ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆಯರಿಬ್ಬರು ವೃದ್ದರೊಬ್ಬರ ಕೈಯಲ್ಲಿದ್ದ ಹಣದ ಚೀಲವನ್ನು ರಾಜಾರೋಷವಾಗಿ ಎಳೆಯಲು ಯತ್ನಿಸಿದ ಘಟನೆ ಉಪ್ಪಿನಂಗಡಿಯ ಹೃದಯ ಭಾಗದಲ್ಲಿ ನಡೆದಿದೆ.

ಉಪ್ಪಿನಂಗಡಿಯ ಹೃದಯ ಭಾಗದಲ್ಲಿನ ಅಡಕೆ ಅಂಗಡಿಯಲ್ಲಿ ಅಡಕೆ ಮಾರಾಟ ಮಾಡಿ ದೊರೆತ ಹಣದೊಂದಿಗೆ ಹಿಂತಿರುಗುತ್ತಿದ್ದ ವೃದ್ದರೊಬ್ಬರ ಹಿಂದೆ ಮುಂದೆ ನಿಂತು ಹೊಂಚು ಹಾಕುತ್ತಿದ್ದ ಮಹಿಳೆಯರಿಬ್ಬರ ಪೈಕಿ ಹಿಂಬದಿ ಇದ್ದಾಕೆ ವೃದ್ದರ ಕೈಯಲ್ಲಿದ್ದ ಚೀಲವನ್ನು ಎಳೆಯುತ್ತಿದ್ದಂತೆಯೇ ಜಾಗೃತಗೊಂಡ ವೃದ್ದ ಚೀಲವನ್ನು ಬಲವಾಗಿ ಹಿಡಿದುಕೊಂಡಿದ್ದಾರೆ. ಯಾರು ಹಣವಿದ್ದ ಚೀಲವನ್ನು ಎಳೆದದ್ದು ಎಂದು ತಿಳಿಯುವಷ್ಠರಲ್ಲಿ ಬೇರೊಂದು ವಿಚಾರದ ಬಗ್ಗೆ ಗಮನ ಸೆಳೆದವರಂತೆ ವರ್ತಿಸಿ ಮಹಿಳೆಯರಿಬ್ಬರೂ ಸ್ಥಳದಿಂದ ನಿರ್ಗಮಿಸುತ್ತಿರುವುದು ಸ್ಥಳದಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

 

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...