Wednesday, April 10, 2024

ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೋಲೆಗೊಳಿಸುವ ಸರಕಾರದ ಧೋರಣೆಯನ್ನು ಖಂಡಿಸಿ ಅ.18 ರಂದು ಪ್ರತಿಭಟನೆ-ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ

ಬಂಟ್ವಾಳ: ಪಂಚಾಯತ್ ರಾಜ್ ವ್ಯವಸ್ಥೆಯನ್ನು ಅಸ್ಥಿರ ಗೊಳಿಸಿ, ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೋಲೆಗೊಳಿಸುವ ಬಿಜೆಪಿ ಸರಕಾರದ ಧೋರಣೆ ಯನ್ನು ಖಂಡಿಸಿ ಅ.18 ರಂದು ಮಾಜಿ ಸಚಿವ ಬಿ.ರಮಾನಾಥ ರೈ ಅವರ ಮುಂದಾಳತ್ವದಲ್ಲಿ ತಾಲೂಕು ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ಯ ವ್ಯವಸ್ಥೆ ಯ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾ.ಪಂ.ಅಧ್ಯಕ್ಷರು ಚೆಕ್ ಗೆ ಸಹಿ ಹಾಕುವ ಅಧಿಕಾರವನ್ನು ತೆಗೆದುಹಾಕುವ ಅದೇಶ ಜಾರಿಮಾಡಲು ಮುಂದಾಗಿರುವ ಜೊತೆಗೆ ಪಂಚಾಯತ್ ಸದಸ್ಯ ರ ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸುವ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆ ಯನ್ನು ಬುಡಮೇಲು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ರಮೇಶ್ ಕುಮಾರ್ ವರದಿಯಂತೆ ಸಿದ್ದರಾಮಯ್ಯ ಅವರ ಆಡಳಿತ ಅವಧಿಯಲ್ಲಿ ಸುಮಾರು 23 ಇಲಾಖೆಯನ್ನು ನಂಬಿ ಕೊಟಿದ್ದರು. ಆದರೆ ಇವರು ಎಲ್ಲವನ್ನು ತೆಗೆದುಹಾಕಿದಲ್ಲದೆ ಕೇವಲ ಅಧಿಕಾರಿಗೆ ಅಧಿಕಾರ ಕೊಟ್ಟಿರುವುದು ಸರಿಯಾ? ಅಧಿಕಾರಿಗಳ ಮೂಲಕ ಇವರು ಕೆಲಸ ಮಾಡಿಸಿ 40% ಪರ್ಸೆಂಟ್ ಹಣ ವಸೂಲಿ ಮಾಡುವ ತಂತ್ರ ಇದಾಗಿದೆ ಎಂದು ಆರೋಪಿಸಿದ್ದಾರೆ.

ಇದರ ಜೊತೆ ಅನೇಕ ವಿಚಾರಗಳಿವೆ, ಎಲ್ಲವನ್ನೂ ಸೇರಿಸಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ಕೈಗೊಳ್ಳುವ ನಿರ್ಧಾರವನ್ನು ಕಾಂಗ್ರೇಸ್ ಕೈಗೊಂಡಿದೆ. ಬಿಜೆಪಿ ಸರಕಾರದ ಅವಧಿಯಲ್ಲಿ ಸರಕಾರಿ ಸಿಬ್ಬಂದಿ ಗಳನ್ನು ಉಪಯೋಗಿಸಿ ಬಿಜೆಪಿ ಸರಕಾರದ ಕಾರ್ಯಕ್ರಮಕ್ಕೆ ಜನ ಸೇರಿಸುವ ಕೆಲಸ ಮಾಡಿಸಿ, ವ್ಯವಸ್ಥೆಯನ್ನು ದುರುಪಯೋಗ ಪಡಿಸಿಕೊಳ್ಳುವ ಕೆಲಸ ಆಗುತ್ತಿದೆ ಎಂದು ಆರೋಪ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬೇಬಿಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿ.ಪಂ.ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ತಾ.ಪಂ.ಮಾಜಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಪ್ರಮುಖರಾದ ಜಗದೀಶ್ ಕೊಯಿಲ, ಸಂದೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...