Saturday, April 6, 2024

ಬೈರಿಕಟ್ಟೆಯ ಯುವಕ ಸಾಬಿತ್ ನ 15,000 ಕಿ.ಮೀ ಸೈಕಲ್ ನಲ್ಲಿ ಕ್ರಮಿಸುವ ಪವಿತ್ರ ಮಕ್ಕಾ ಯಾತ್ರೆ

ಮಂಗಳೂರು: ವಿಟ್ಲ ಸಮೀಪದ ಬೈರಿಕಟ್ಟೆಯ ಯುವಕ ಸಾಬಿತ್ ಎಂಬವರು ಪವಿತ್ರ ಮಕ್ಕಾ ಯಾತ್ರೆ ಹಾಗೂ ಈಜಿಪ್ಟ್ ನಲ್ಲಿ ಉನ್ನತ ಧಾರ್ಮಿಕ ವಿಧ್ಯಾಭ್ಯಾಸ ಪಡೆಯಲು 10 ದೇಶಗಳನ್ನೊಳಗೊಂಡ 15,000 ಕಿ.ಮೀ. ಕ್ರಮಿಸುವ ಸೈಕಲ್ ಯಾತ್ರೆಯನ್ನು ಕೈಗೊಳ್ಳಲಿದ್ದಾರೆ. ಇದೇ ಅ. 20 ರಂದು ಕೇರಳದ ತಿರುವನಂತಪುರದಿಂದ ಯಾತ್ರೆ ಹೊರಡಲಿದ್ದಾರೆ.

ಕನಸುಗಾರ ಯುವಕ ಹಾಫಿಲ್ ಅಹ್ಮದ್ ಸಾಬಿತ್ ಅವರು ಈಗಾಗಲೇ ಕೇರಳವನ್ನು ಸೈಕಲ್ ನಲ್ಲಿ ಸುತ್ತಿ ಅನುಭವ ಪಡೆದವರು. ಮದೀನಾ ಮತ್ತು ಈಜಿಪ್ತಿನ ವಿಶ್ವವಿದ್ಯಾನಿಲಯಕ್ಕೆ ಸೈಕಲ್ ಮೂಲಕ 15,000 ಕಿಲೋಮೀಟರ್ ದೂರ ಸಂಚರಿಸಿ ಭೇಟಿ ನೀಡಲಿದ್ದಾರೆ.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಬಿತ್, ಅಕ್ಟೋಬರ್ 19ರಂದು ಕನ್ಯಾಕುಮಾರಿ ತಿರುವನಂತಪುರದಿಂದ ಹೊರಡುವ ಕರ್ನಾಟಕ, ಗೋವಾ, ಮಹಾರಾಷ್ಟ್ರ, ರಾಜಸ್ತಾನ, ಹರಿಯಾಣ, ಪಂಜಾಬ್, ಜಮ್ಮು ಕಾಶ್ಮೀರ, ಲಡಾಖ್ ಸಾಗಿ ಪಾಕಿಸ್ತಾನ, ಅಫ್ಘಾನಿಸ್ತಾನ, ಇರಾನ್, ಯುಎಇ, ಸೌದಿ ಮದೀನಾ ತಲುಪುವ ಉದ್ದೇಶ ಹೊಂದಿದ್ದೇನೆ. ಅಲ್ಲಿಂದ ಆಫ್ರಿಕಾ ಖಂಡದ ಈಜಿಪ್ತ್ ಕೈರೋಗೆ ಹೋಗುತ್ತೇನೆ. ಅಲ್ಲಿ ಎರಡು ವರ್ಷಗಳ ಕಾಲ ಹೆಚ್ಚಿನ ವಿದ್ಯಾಭ್ಯಾಸ ಮಾಡುವು ಗುರಿ ಹೊಂದ್ದಿದ್ದೇನೆ ಎಂದು ತಿಳಿಸಿದರು.

ಇನ್ನು ವಿಟ್ಲ ಬೈರಕಟ್ಟೆಯ ಅಬ್ದುಲ್ ರಹಮಾನ್ ಮಸ್ಲಿಯಾರ್ ಮತ್ತು ಹವ್ವಾರ ಪುತ್ರ ಸಾಬಿತ್ ಅವರು ಕುರ್ ಆನ್ ಕಂಠಪಾಠ ಮತ್ತು ಉಪನ್ಯಾಸ ನೀಡುವುದರಲ್ಲಿ ಈಗಾಗಲೇ ಸಾಧನೆ ಮಾಡಿದ್ದಾರೆ. ಇವರು ಇನ್ ಸ್ಟಾಗ್ರಾಮ್ ನಲ್ಲಿ 60,000ಕ್ಕೂ ಹೆಚ್ಚು ಮಂದಿ ಫಾಲೋವರ್ ಗಳನ್ನು ಹೊಂದಿದ್ದಾರೆ. ಅತ್ಯಂತ ಕಿರಿಯ ತರಬೇತುದಾರನಾಗಿ ಇಂಡಿಯಾ ಬುಕ್ ರೆಕಾರ್ಡ್ ಮಾಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಅಬೂಬಕರ್ ಪುತ್ತು ಉಪ್ಪಿನಂಗಡಿ, ಉಬೈದ್ ವಿಟ್ಲ ಬಝಾರ್, ಮೊದಲಾದವರು ಉಪಸ್ಥಿತರಿದ್ದರು.

More from the blog

ಮತದಾನ ಜಾಗೃತಿ ಅಂಗವಾಗಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ...

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖರ ಮನೆಗೆ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ: ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಬೇಕಾಗಿದೆ ಎಂದು ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್...

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಇಬ್ಬರು ಗಂಭೀರ

ಬಂಟ್ವಾಳ: ಮುಂಜಾನೆ ವೇಳೆ ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಕೈಕಂಬ ಎಂಬಲ್ಲಿ ಬೈಕ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಹಾಗೂ ಸಹಸವಾರ ಇಬ್ಬರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ...

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...