Saturday, April 13, 2024

ಪ್ರವಾದಿ ಜನ್ಮ ದಿನದ ಪ್ರಯುಕ್ತ ಪ್ರೆಂಡ್ಸ್ ಅಸೋಸಿಯೇಶನ್ ವತಿಯಿಂದ ಮೌಲೂದ್ ಪಾರಾಯಣ ಹಾಗೂ ಸಾರ್ವಜನಿಕ‌ ಅನ್ನದಾನ

ಪಾಣೆಮಂಗಳೂರು‌: ಆಲಡ್ಕ ಫ್ರೆಂಡ್ಸ್ ಅಸೋಸಿಯೇಶನ್ ಸಂಸ್ಥೆಯ ವತಿಯಿಂದ ಲೋಕ ಪ್ರವಾದಿ ಹಝ್ರತ್ ಮುಹಮ್ಮದ್ ಮುಸ್ತಫಾ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ ಅವರ ಜನ್ಮ ಮಾಸದ ಗೌರವಾರ್ಥವಾಗಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಮೌಲಿದ್ ಪಾರಾಯಣ ಹಾಗೂ ಸಾರ್ವಜನಿಕ ಅನ್ನದಾನ ಕಾರ್ಯಕ್ರಮ ನಡೆಯಿತು.

ಅಸರ್ ನಮಾಝಿನ ಬಳಿಕ ಸಂಸ್ಥೆಯ ಕಚೇರಿಯ ಬಳಿ ನಡೆದ ಮೌಲೂದ್ ಕಾರ್ಯಕ್ರಮದಲ್ಲಿ ಆಲಡ್ಕ ಬಿ‌.ಜೆ.ಎಂ ಮುದರ್ರಿಸ್ ಅಶ್ರಫ್ ಸಖಾಫಿ ಸವಣೂರು ದುಃಆ ನೇತೃತ್ವ ನೀಡಿದರು.

ಮಜ್ಲಿಸ್‌‌ನಲ್ಲಿ ಆಲಡ್ಕ ಎಂ‌.ಜೆ.ಎಂ ಮಸೀದಿಯ ಸದರ್ ಮುಅಲ್ಲಿ‌ಮ್ ಮುಹ್ಯಿದ್ಧೀನ್ ಝುಹ್ರಿ, ಫ್ರೆಂಡ್ಸ್ ಅಸೋಸಿಯೇಶನ್ ಅಧ್ಯಕ್ಷ ಅಬ್ದುಲ್ ಮಜೀದ್ ಹಾಜಿ, ಗೌರವಾಧ್ಯಕ್ಷರು ಪಿ.ಮುಹಮ್ಮದ್, ಕಾರ್ಯದರ್ಶಿ ಇಸ್ಮಾಯಿಲ್ ಯು‌., ಸ್ಥಳೀಯರಾದ ಅಬ್ದುಲ್ ಖಾದರ್ ಮದನಿ, ರಝಾಕ್ ಮುಸ್ಲಿಯಾರ್ ಉಪ್ಪುಗುಡ್ಡೆ ಮೊದಲಾದವರು ಭಾಗವಹಿಸಿದರು.

More from the blog

ಯುವಮೋರ್ಚಾ ಬಂಟ್ವಾಳ ವತಿಯಿಂದ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಬಿ. ಸಿ ರೋಡಿನ ರಕ್ತೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ

ಯುವಮೋರ್ಚಾ ಬಂಟ್ವಾಳ ವತಿಯಿಂದ ನರೇಂದ್ರ ಮೋದಿ ಮತೊಮ್ಮೆ ಪ್ರಧಾನಿಯಾಗಲೆಂದು ರಕ್ತೇಶ್ವರಿ ದೇವಸ್ಥಾನ ಬಿ. ಸಿ ರೋಡಿನಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...