Sunday, April 7, 2024

ಅ. 21 ರಂದು ಶ್ರೀ ಕನಕ ಸಭಾ ಮಂಟಪದ ಉದ್ಘಾಟನಾ ಸಮಾರಂಭ-ಕೈಯೂರು ನಾರಾಯಣ ಭಟ್

ಬಂಟ್ವಾಳ: ಮಂಚಿ ಕೊಳ್ನಾಡು ಕನಕಗಿರಿ ಶ್ರೀ ಗೋಪಾಲಕೃಷ್ಣ ಸೇವಾ ವಿಶ್ವಸ್ಥ ಮಂಡಳಿಯ ವತಿಯಿಂದ ನಿರ್ಮಾಣಗೊಂಡ ಶ್ರೀ ಕನಕ ಸಭಾ ಮಂಟಪದ ಉದ್ಘಾಟನಾ ಸಮಾರಂಭವು ಅ. 21 ಹಾಗೂ 22ರಂದು ನಡೆಯಲಿದೆ ಎಂದು ಮಂಡಳಿಯ ಸಂಚಾಲಕ ಕೈಯೂರು ನಾರಾಯಣ ಭಟ್ ಹೇಳಿದರು.

ಅವರು ಬಿ.ಸಿ.ರೋಡಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅ. 21ರಂದು ಸಂಜೆ ಸಾಮೂಹಿಕ ಪ್ರಾರ್ಥನೆ, ವಾಸ್ತು ಪೂಜೆ-ಹೋಮ ನಡೆಯಲಿದೆ. ಅ. 22ರಂದು ಅರ್ಧ ಏಕಾಹ ಭಜನೆ ನಡೆಯಲಿದ್ದು, ದೈವನರ್ತಕ ವೆಂಕಪ್ಪ ಪಂಡಿತ್ ಪಾಣಾಜೆಕೋಡಿ ಅವರು ದೀಪ ಬೆಳಗಿಸಲಿದ್ದಾರೆ. ಬಳಿಕ ಮಹಾಗಣಪತಿ ಹವನ, ಸಂಜೆ ಶ್ರೀ ದುರ್ಗಾನಮಸ್ಕಾರ ಪೂಜೆ, ಭಜನಾ ಮಂಗಳೋತ್ಸವ, ಮಂಗಳಾರತಿ, ಪ್ರಸಾದ ವಿತರಣೆ, ಬೋಳಂತೂರು ಮಂಚಿ ವಸುಧಾರಾ ಸಾಂಸ್ಕೃತಿಕ ಕಲಾ ಸಂಘದಿAದ ನೃತ್ಯ ವೈಭವ ಪ್ರದರ್ಶನಗೊಳ್ಳಲಿದೆ.

ರಾತ್ರಿ 7.30ಕ್ಕೆ ಧಾರ್ಮಿಕ ಸಭೆಯಲ್ಲಿ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಮಹಾಸ್ವಾಮಿಗಳು ಆಶೀರ್ವಚನ ನೀಡಲಿದ್ದು, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆ ವಹಿಸಿದ್ದಾರೆ. ಬಳಿಕ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಜಾಂಬವತಿ ಕಲ್ಯಾಣ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಂಡಳಿಯ ಅಧ್ಯಕ್ಷ ಸೀತಾರಾಮ ಶೆಟ್ಟಿ ಚೌಕ, ಪ್ರಮುಖರಾದ ಕೋಕಲ ರಾಮಕೃಷ್ಣ ನಾಯಕ್, ಅನಾರು ಕೃಷ್ಣ ಶರ್ಮ, ರವೀಂದ್ರ ಕುಕ್ಕಾಜೆ, ಡಾ.ಮಹಾಲಿಂಗ ಭಟ್ ಉಪಸ್ಥಿತರಿದ್ದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...