Thursday, April 11, 2024

ಭೂತಕೋಲದ ಬಗ್ಗೆ ಹೊಸ ಚರ್ಚೆ ಹುಟ್ಟುಹಾಕಿದ ಚೇತನ್‌

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಸಿನಿಮಾ ಹೊಸ ಮೈಲಿಗಲ್ಲು ಸೃಷ್ಟಿಸಿದ್ದು, ಇದೀಗ ಭಾರತದ ಚಿತ್ರರಂಗದಲ್ಲೂ ಚಾಪು ಮೂಡಿಸುತ್ತಿದೆ. ಸ್ಟಾರ್​ ಸಿನಿಮಾ ನಟರು, ನಿರ್ದೇಶಕರು ಹಾಗೂ ನಿರ್ಮಾಪಕರನ್ನ ಬೆರಗುಗೊಳಿಸಿರುವ ರಿಷಬ್ ಶೆಟ್ಟಿಯ ಈ ಚಿತ್ರದಲ್ಲಿ ಬರುವ ಭೂತಕೋಲದ ಬಗ್ಗೆ ಹೊಸ ಚರ್ಚೆ ಶುರುವಾಗಿದೆ.

ಕಾಂತಾರ ಚಿತ್ರದಲ್ಲಿ ಬರುವ ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರಿದೆ ಎಂದು ರಿಷಬ್ ಶೆಟ್ಟಿ ಹೇಳಿದ್ದರು. ಆದರೆ ಅದನ್ನ ಅಲ್ಲಗಳೆದು ಟ್ವೀಟ್ ಮೂಲಕ ಬರೆದುಕೊಂಡಿರುವ ಆ ದಿನಗಳು ಖ್ಯಾತಿಯ ನಟ ಚೇತನ್, ನಮ್ಮ ಕನ್ನಡದ ಚಲನಚಿತ್ರ ಕಾಂತಾರವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಆದರೆ ಇದು ನಿಜವಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನ ಪರದೆಯ ಮೇಲಾ ಆಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಆದ್ರೆ ಇದೀಗ ಭೂತಕೋಲದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಲವು ಚರ್ಚೆಗಳು ಶುರುವಾಗಿವೆ.

 

 

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...