Wednesday, April 24, 2024

ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಪ್ಯಾನ್ ಫೆಸಿಫಿಕ್ ಮಾಸ್ಟರ್ ಗೇಮ್ಸ್ ಈಜು ಸ್ಪರ್ಧೆಗೆ ಸಂದೇಶ್ ಆಯ್ಕೆ

ಸಂತ ಅಲೋಶಿಯಸ್‌ನ ವಿ ವನ್ ಅಕ್ವಾ ಸೆಂಟರ್ ಸ್ವಿಮ್ಮಿಂಗ್ ಪೂಲ್‌ನ ತರಬೇತುದಾರ ಸಂದೇಶ್ ಅವರು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಪ್ಯಾನ್ ಫೆಸಿಫಿಕ್ ಮಾಸ್ಟರ್ ಗೇಮ್ಸ್ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

44ರ ಹರೆಯದ ಸಂದೇಶ್ ಮೂಲತಃ ಮೀನುಗಾರ ಸಮುದಾಯದವರಾಗಿದ್ದು, ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಈಜು ಸ್ಪರ್ಧೆಯ ವಿವಿಧ ವಿಭಾಗಗಳಲ್ಲಿ ಆರು ಚಿನ್ನದ ಪದಕಗಳನ್ನು ಗಳಿಸಿದ್ದಾರೆ. ಅದಕ್ಕೂ ಮೊದಲು ನಡೆದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲೂ 13 ಪದಕಗಳ್ನು ತಮ್ಮದಾಗಿಸಿಕೊಂಡಿದ್ದರು. ಇದೀಗ ನವೆಂಬರ್ ಪ್ರಥಮ ವಾರದಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಈ ಅಂತಾರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಅಕ್ವಾ ಸೆಂಟರ್‌ನ ನವೀನ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

ಈ ಸ್ಪರ್ಧೆಯಲ್ಲಿ ಭಾಗವಹಿಸಲು ಸುಮಾರು 2.5 ಲಕ್ಷ ರೂ.ಗಳಷ್ಟು ಖರ್ಚಾಗಲಿದ್ದು, ಸಹೃದಯಿಗಳ ಸಹಕಾರದ ನಿರೀಕ್ಷೆಯನ್ನು ಸಂದೇಶ್ ಹೊಂದಿದ್ದಾರೆ. ಅವರ ಮೊಬೈಲ್ (9743171748) ಮೂಲಕ ಅವರನ್ನು ಸಂಪರ್ಕಿಸಿ ಅವರಿಗೆ ಆರ್ಥಿಕ ನೆರವನ್ನು ಒದಗಿಸುವಂತೆ ನವೀನ್ ಈ ಸಂದರ್ಭ ಮನವಿ ಮಾಡಿದರು.

More from the blog

ಎಪ್ರಿಲ್ 26 ರಂದು ಸಮಸ್ತ ಮದರಸ ಗಳಿಗೆ ರಜೆ ಘೋಷಣೆ

ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಪ್ರಿಲ್ 26 ರಂದು ಸಮಸ್ತ ಮದರಸ ಗಳಿಗೆ ರಜೆ ಘೋಷಿಸಲಾಗಿದೆ. ಸಮಸ್ತದ ನಿರ್ದೇಶನದಂತೆ ಸಮಸ್ತದ ಅಧೀನದಲ್ಲಿ ಬರುವ ಜಿಲ್ಲೆಯ ಎಲ್ಲಾ ಮದರಸ ಗಳಿಗೆ ರಜೆ ನೀಡಲಾಗಿದೆ ಎಂದು ದ.ಕ....

ತಗ್ಗಿದ ಮಳೆ, ರಾಜ್ಯದ 10 ಜಿಲ್ಲೆಗಳಿಗೆ ಮತ್ತೆ ಬಿಸಿಗಾಳಿ ಎಚ್ಚರಿಕೆ

ಬೆಂಗಳೂರು: ಕಳೆದೊಂದು ವಾರದಿಂದ ರಾಜ್ಯದ ವಿವಿಧೆಡೆ ಭಾರೀ ಮಳೆಯಾದ ಬೆನ್ನಲ್ಲೇ ಇದೀಗ ತಾಪಮಾನ ಮತ್ತೆ ಏರಿಕೆಯಾಗಿದ್ದು ರಾಜ್ಯದ 10 ಜಿಲ್ಲೆಗಳಲ್ಲಿ ಬಿಸಿಗಾಳಿಯ ಮುನ್ನೆಚ್ಚರಿಕೆ ನೀಡಲಾಗಿದೆ. ಎ. 24ರಿಂದ 27ರ ವರೆಗೆ ರಾಯಚೂರು, ವಿಜಯಪುರ, ಯಾದಗಿರಿ,...

ಮತದಾನ-ಮತ ಎಣಿಕೆ ದಿನಗಳಂದು ಮದ್ಯ ಮಾರಾಟ ನಿಷೇಧ

ಮಂಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಮತದಾನ ಹಾಗೂ ಮತ ಎಣಿಕಾ ಕಾರ್ಯ ನಡೆಯುವ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಏಪ್ರಿಲ್ 24ರ ಸಂಜೆ...

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ : ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಮಂಗಳೂರು: ನಗರದ ಅತ್ತಾವರದ ವಸತಿಗೃಹವೊಂದರ ಬಳಿಯಿಂದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಅಪರಾಧಿಗೆ ಮಂಗಳೂರಿನ ನ್ಯಾಯಾಲಯ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬಸವರಾಜ್‌ ಅಲ್ಲಪ್ಪ ಮಡಿವಾಳರ್‌ ಆರೋಪಿ. 2022ರ ಡಿ.13ರಂದು ಬಸವರಾಜ್‌...