Thursday, April 11, 2024

ಸಂತ ಮದರ್ ತೆರೇಸಾ ವಿಚಾರ ವೇದಿಕೆಯಿಂದ ದೀಪಾವಳಿ ಹಬ್ಬ ಆಚರಣೆ

ಬೆಳಕಿನ ದೀಪಾವಳಿ ಹಬ್ಬವು ಭಾರತದ ಪ್ರಸಿದ್ಧ ಹಬ್ಬಗಳಲ್ಲಿ ಒಂದಾಗಿದ್ದು, ದೀಪಾವಳಿಯನ್ನು ಎಲ್ಲೆಡೆ ಬಹಳಷ್ಟು ಉತ್ಸಾಹ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಬೆಳಕಿನ ಹಬ್ಬವು ಎಂದು ಕರೆಯಲ್ಪಡುವ ಈ ಹಬ್ಬವು ಕತ್ತಲೆಯ ಮೇಲೆ ವಿಜಯವನ್ನು ಮತ್ತು ಕೆಟ್ಟದರ ಮೇಲೆ ಒಳ್ಳೆಯದನ್ನು ಸೂಚಿಸುತ್ತದೆ. ಈ ಹಬ್ಬದ ಪ್ರಯುಕ್ತ ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಇದರ ವತಿಯಿಂದ ಅಕ್ಟೋಬರ್ 24 ರಂದು ಸೋಮವಾರ ಸಂಜೆ 5.30 ಗಂಟೆಗೆ ನಂತೂರು ಸಂದೇಶ ಪ್ರತಿಷ್ಠಾನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಆ ದಿನ ಗೂಡುದೀಪ ಸ್ಪರ್ಧೆಯನ್ನು ಏರ್ಪಡಿಸಿದ್ದು, 24 ರಂದು ಸೋಮವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯ ಒಳಗೆ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿ ಸಂಘಟಕರು ನಿಗದಿಪಡಿಸಿದ ಸ್ಥಳದಲ್ಲಿ ಗೂಡುದೀಪವನ್ನು ವ್ಯವಸ್ಥೆ ಮಾಡಬೇಕು, ರೆಡಿಮೇಟ್ ವಸ್ತುಗಳನ್ನು ಬಳಸದೆ ಸ್ವಪ್ರಯತ್ನದಿಂದ ಗೂಡುದೀಪವನ್ನು ರಚಿಸತಕ್ಕದ್ದು, ಕ್ರಿಯಾತ್ಮಕವಾಗಿ ಹಾಗೂ ಕಲಾತ್ಮಕವಾಗಿ ರಚಿಸಲ್ಪಟ್ಟ ಗೂಡು ದೀಪಗಳಿಗೆ ವಿಶೇಷ ಆದ್ಯತೆ. ತಮ್ಮ ಕಲಾಕೃತಿಯ ಉದ್ದಳತೆ 3 x 2 ಪೀಟ್‌ಗಿಂತ ಮೀರಬಾರದು. ಪ್ರಥಮ ದ್ವಿತೀಯ, ತೃತೀಯ, ನಗದು ಹಾಗೂ ಫಲಕ ಹಾಗೂ ಎರಡು ಸಮಾಧಾನಕರ ಬಹುಮಾನಗಳ ವ್ಯವಸ್ಥೆ ಮಾಡಲಾಗಿದೆ.

ನೋಂದಾವಣಿ 22-10-2022 ರಂದು ಶನಿವಾರ ಸಂಜೆ 4 ಗಂಟೆಯ ಒಳಗೆ ಮಾಡತಕ್ಕದ್ದು, ನೋಂದಾವಣೆ ಮಾಡಲು 9448503739, 9845291088, 9449051515 ಈ ನಂಬರನ್ನು ಕರೆ ಮಾಡುವುದು.

ಈ ಕಾರ್ಯಕ್ರಮದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಪೀಟರ್ ಪಾವ್ ಸಾಲ್ದಾನ್ಹ ಕಾರ್ಯಕ್ರಮ ಉದ್ಘಾಟಿಸಲಿದ್ದು, ವೇದಿಕೆ ಅಧ್ಯಕ್ಷರಾದ ರೋಮ್ ಕ್ಯಾಸಲೀನೊ ಅಧ್ಯಕ್ಷತೆ ವಹಿಸಲಿರುವರು.

ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ.ಪಿ, ಸುಬ್ರಹ್ಮಣ್ಯ ಯಡಪಡಿತ್ತಾಯ ಹಾಗೂ ವಿಜಯ ಕರ್ನಾಟಕ ದಿನಪತ್ರಿಕೆ ಮಂಗಳೂರು ಇದರ ಮುಖ್ಯ ವರದಿಗಾರರಾದ ಮೊಹಮ್ಮದ್ ಆರಿಫ್ ಮುಖ್ಯ ಅತಿಥಿಗಳಾದ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಸ್ವರಾಂಜಲಿ ಮ್ಯೂಸಿಕ್ ಸ್ಕೂಲ್‌ನ ಮಕ್ಕಳು ಹಾಗೂ ವಂದನೀಯ ಅಲ್ಬುಕರ್ಕ್ ಮೆಮೋರಿಯಲ್ ಸಂಗೀತ ವಾಲ್ಟರ್ ವಾಲ್ಟರ್ ಪಂಗಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿರುವುದು ಎಂದು ವೇದಿಕೆಯ ಅಧ್ಯಕ್ಷರಾದ ರಾಯ್ ಕ್ಯಾಸ್ತಲೀನೆ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಕಾರ್ಯಕ್ರಮದ ಸಂಘಟಕರಾದ ಸುಶೀಲ್ ನೊರೋನ್ಹಾ, ಮಾಜಿ ಮೇಯರ್ ಅಶ್ರಫ್, ಮಾಜಿ ಕಾರ್ಪೊರೇಟರ್‌ ಪ್ರಕಾಶ್ ಸಾಲ್ಯಾನ್ ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ್, ಅಧ್ಯಕ್ಷ ಸ್ಪ್ಯಾನಿ ಲೋಬೊ ಉಪಸ್ಥಿತರಿದ್ದರು.

More from the blog

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...