Saturday, April 13, 2024

ಮಹಿಳೆಯ ಮಾನಭಂಗಕ್ಕೆ ಯತ್ನ : ಆರೋಪಿ ಆರೆಸ್ಟ್

ಬಂಟ್ವಾಳ: ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿ ಪೋಲಿಸ್ ಬಲೆಗೆ ಬಿದ್ದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೇರಳ ಮೂಲದ ಸಂತೂ ಯಾನೆ ಸಂತೋಷ್ ಬಂಧಿತ ಆರೋಪಿಯಾಗಿದ್ದಾನೆ.

ಕನ್ಯಾನ ಗ್ರಾಮದ ಇಚ್ಚೆ ನಿವಾಸಿ ರಮೇಶ್ ಎಂಬವರ ಪತ್ನಿ ಲಲಿತಾ ಎಂಬವರ ಮಾನಭಂಗಕ್ಕೆ ಯತ್ನಿಸಿದ ಸಂತೂ ಇದೀಗ ಪೋಲಿಸರ ಅತಿಥಿಯಾಗಿದ್ದಾನೆ.
ಕೆಂಪು ಕಲ್ಲು ಲಾರಿಯಲ್ಲಿ ಲೋಡ್ ಕೆಲಸ ಮಾಡುವ ಆರೋಪಿ ಸಂತೋಷ್ ಬೈಕಿನಲ್ಲಿ ಬಂದು ಮನೆಗೆ ಹೋಗುತ್ತಿದ್ದ ಮಹಿಳೆಯನ್ನು ತಡೆದು ನಿಲ್ಲಿಸಿ ಮಾನಭಂಗಕ್ಕೆ ಯತ್ನಿಸಿದ ವೇಳೆ ಮಹಿಳೆಯ ಸಂಬಂಧಿಕರು ನೋಡಿದ್ದಾರೆ ಎನ್ನಲಾಗಿದೆ. ಇನ್ನು ಈ ವೇಳೆ  ಆತ ಬೈಕ್ ಬಿಟ್ಟು ಪರಾರಿಯಾಗಿದ್ದ ಎಂದು ವಿಟ್ಲ ಪೊಲೀಸ್ ಠಾಣೆ ಗೆ ದೂರು ನೀಡಿದ್ದರು.
‌ದೂರಿನ ಹಿನ್ನೆಲೆಯಲ್ಲಿ ಕಾರ್ಯಚರಣೆ ನಡೆಸಿದ ವಿಟ್ಲ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್.ಅವರ ನೇತೃತ್ವದ ಎಸ್.ಐ.ಸಂದೀಪ್ ಅವರ ತಂಡ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...