Sunday, April 14, 2024

ಉಚಿತ ವೈದ್ಯಕೀಯ ಹಾಗು ದಂತ, ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಶ್ರೀ ಸತ್ಯಸಾಯಿ ಸೇವಾ ಸಮಿತಿ, ಈಶ್ವರಾಂಬಾ ಟ್ರಸ್ಟ್ (ರಿ.) ಗಾಂಧಿನಗರ, ಮಂಗಳೂರು ಇವರ ಆಶ್ರಯದಲ್ಲಿ ಹಾಗು ಕಲ್ಲಾಡಿ ವಿಠಲ ಶೆಟ್ಟಿ ಸೇವಾ ಟ್ರಸ್ಟ್ (ರಿ.) ಕುಂಡಾವು, ಇರಾ ಗ್ರಾಮ ಪಂಚಾಯತ್, ಯುವಕ ಮಂಡಲ(ರಿ.) ಇರಾ ಇವರ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಹಾಗು ದಂತ, ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ದಿನಾಂಕ ಆದಿತ್ಯವಾರ ದ.ಕ. ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಇರಾ ಇಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಮೊಕ್ತೇಸರ ವೈ.ಬಿ ಸುಂದರ್, ಇರಾ ಗ್ರಾಮ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷ ರೂ, ಹಾಲಿ ಸದಸ್ಯ ಅಬ್ದುಲ್ ರಝಾಕ್ ಕುಕ್ಕಾಜೆ ಮಾತನಾಡಿ ಶ್ರೀ ಸತ್ಯಸಾಯಿ ಸೇವಾ ಟ್ರಸ್ಟ್ ನ ಹಾಗು ಯುವಕ ಮಂಡಲದ ಕಾರ್ಯಕ್ರಮಗಳನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಸತ್ಯಸಾಯಿ ಸೇವಾ ಸಂಸ್ಥೆ ಯ ರಾಜ್ಯ ಪದಾಧಿಕಾರಿ ಚಂದ್ರಶೇಖರ್ ನಾಯಕ್, ನಿರಂಜನ್ ಹೆಬ್ಬಾರ್, ಕಲ್ಲಾಡಿ ವಿಠ್ಠಲ ಶೆಟ್ಟಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಜಯರಾಮ್ ಪೂಜಾರಿ ಸೂತ್ರಬೈಲು, ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಮೊಯ್ದಿನ್ ಕುಂಞ, ಇರಾ ಶಾಲೆಯ ಮುಖ್ಯ ಶಿಕ್ಷಕಿ ಸೋನಿತ, ಅಧ್ಯಾಪಕ ಮಹಮ್ಮದ್, ಯುವಕ ಮಂಡಲ(ರಿ.) ಇರಾ ಇದರ ಅಧ್ಯಕ್ಷರಾದ ಶ್ರೀ ಅಶ್ವಿತ್ ಕೊಟ್ಟಾರಿ ಇರಾ, ಯನೆಪೊಯ ವೈದ್ಯಕೀಯ ಸಂಸ್ಥೆಯ ಡಾ| ಅಫ್ರೀನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸತ್ಯಸಾಯಿ ಸೇವಾ ಟ್ರಸ್ಟ್ ನ ಸದಸ್ಯರಾದ ಶ್ರೀ ದೇವಾನಂದ ರೈ ಕಾರ್ಯಕ್ರಮ ನಿರೂಪಿಸಿದರು.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...