Saturday, April 13, 2024

ಪಾಕಿಸ್ತಾನದ ವಿರುದ್ಧ ಭಾರತ ಗೆದ್ದಿರೋದು ಕೆಲವರಿಗೆ ಬೇಸರ ಆಗಿರಬಹುದು-ಕಲ್ಲಡ್ಕ ಪ್ರಭಾಕರ್ ಭಟ್

ಚಿಕ್ಕಬಳ್ಳಾಪುರ: ಪಾಕಿಸ್ತಾನ ಹಾಗೂ ಭಾರತದ ರೋಚಕ ಕ್ರಿಕೆಟ್ ಪಂದ್ಯದಲ್ಲಿ ಭಾರತ ಗೆದ್ದಿರುವುದು ಕೆಲ ಜನರಿಗೆ ಬೇಸರ ಆಗಿರಬಹುದು ಅಂತ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ನಗರ ಹಾಗೂ ಗ್ರಾಮಾಂತರ ಆರ್‌ಎಸ್‌ಎಸ್ ಪಥ ಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಪಾಕಿಸ್ತಾನದ ವಿರುದ್ಧ ಭಾರತ ಗೆದ್ದಿರುವುದು, ಪಾಕಿಸ್ತಾನ ಜಿಂದಾಬಾದ್ ಅಂತ ಹೇಳುವವರಿಗೆ ಬೇಸರ ಆಗಿರಬಹುದು. ಆ ರೀತಿಯ ಮಾನಸಿಕತೆ ಈ ದೇಶದಲ್ಲಿ ಕೆಲ ಮುಸ್ಲಿಮರಲ್ಲಿದೆ ಎಂದು ಕಿಡಿಕಾರಿದ್ದಾರೆ.

ಈ ದೇಶದಲ್ಲಿ ಒಳ್ಳೆಯ ಮುಸ್ಲಿಮರೂ ಇದ್ದಾರೆ. ದೇಶವನ್ನು ವಿರೋಧಿಸುವವರೂ ಇದ್ದಾರೆ. ದೇಸವನ್ನು ವಿರೋಧಿಸುವವರು ಯೋಚನೆ ಮಾಡುವಾಗ ಪಾಕಿಸ್ತಾನದ ಬಗ್ಗೆಯೇ ಯೋಚನೆ ಮಾಡುತ್ತಾರೆ.

ಈ ದೇಶವನ್ನು ಪಾಕಿಸ್ತಾನ ಮಾಡುವ ಉದ್ದೇಶ ಅವರದ್ದಾಗಿದೆ. ಜನಸಂಖ್ಯೆ ಹೆಚ್ಚಾದರೆ ನಮಗೆ ಲಾಭ ಆಗುತ್ತೆ ಅಂತ ಅವರಿಗೆ ತಿಳಿದಿದೆ. ಅದಕ್ಕಾಗಿಯೇ ಅವರು ಭಾರೀ ದೊಡ್ಡ ಪ್ರಯತ್ನ ಮಾಡ್ತಿದ್ದಾರೆ ಎಂದು ಎಚ್ಚರಿಸಿದ್ದಾರೆ.

ಜನಸಂಖ್ಯಾ ನಿಯಂತ್ರಣದ ಘೋಷಣೆಗಳು ಹಿಂದೂಗಳಿಗೆ ಮಾತ್ರ ಸೀಮಿತವಾಗಿವೆ. ಮುಸ್ಲಿಮರಿಗೆ ಈ ದೇಶದಲ್ಲಿ ಜನಸಂಖ್ಯೆ ನಿಯಂತ್ರಣ ಘೋಷಣೆಗಳು ಅನ್ವಯವಾಗಲ್ಲ. ಜನಸಂಖ್ಯೆ ಹೆಚ್ಚು ಮಾಡಿಕೊಂಡು ಹಿಂದೂ ವಿರೋಧಿ ಕೃತ್ಯಗಳನ್ನು ಮಾಡುತ್ತಿದ್ದಾರೆ.

ಪಿಎಫ್‌ಐ ಹೆಸರಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಕೊಲೆ ಪ್ರಯತ್ನ ಮಾಡ್ತಿದ್ದಾರೆ. ಎಲ್ಲ ಕಡೆ ಅವರದ್ದೇ ನಡೀತಿದೆ. ಪಥ ಸಂಚಲನ ಮಸೀದಿ ಮುಂದೆ ಹೋಗಬಾರದು ಅಂತ ಹೇಳ್ತಾರೆ.

ಮಸೀದಿಗೆ ಜಾಗ ಕೊಟ್ಟವರು ಯಾರು? ನಾವು ರಂಜಾನ್ ಮೆರವಣಿಗೆಗೆ ಅಡ್ಡಿ ಮಾಡಿದ್ದೀವಾ ಎಂದು ಪ್ರಶ್ನಿಸಿದ್ದಾರೆ.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...