Friday, April 5, 2024

ಜೀವ ಹೋಗುವ ಸ್ಥಿತಿಯಲ್ಲಿದ್ದ ಮಗು ಬದುಕಿ ಬಂತು ; ಕೃಷ್ಣಾ ನಗರಿಯಲ್ಲಿ ಮತ್ತೆ ಅಜ್ಜನ ಕಾರ್ಣಿಕ ಸಾಬೀತು

ಉಡುಪಿ: ಜೀವ ಹೋಗುವ ಸ್ಥಿತಿಯಲ್ಲಿದ್ದ ಮಗು ಕೊರಗಜ್ಜನ ದಯೆಯಿಂದ ಬದುಕಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಸಾಗರ ಮೂಲದ ಪುಟ್ಟ ಹೆಣ್ಣು ಮಗುವಿಗೆ ವಿಪರೀತ ಜ್ವರ ಕಂಡು ಬಂದಿತ್ತು. ಎರಡು ದಿನ ಕಳೆದರೂ ಜ್ವರ ಕಡಿಮೆಯಾಗದೇ ಮಗು ಅಳು ನಿಲ್ಲಿಸುತ್ತಿರಲ್ಲಿಲ್ಲ. ಹೀಗಾಗಿ‌ ಕುಂದಾಪುರದ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಅಸ್ಪತ್ರೆಯಲ್ಲಿ ಮಗುವಿಗೆ ಪಿಡ್ಸ್ ಇರುವುದಾಗಿಯೂ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಅಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದಾರೆ. ಇನ್ನು ಈ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದ್ರೆ ಐಸಿಯು ನಲ್ಲಿದ್ದ ಮಗುವಿನ ಆರೋಗ್ಯ ಚಿಂತಾಜನಕವಾಗಿತ್ತು. ಅಷ್ಟೇ ಅಲ್ಲದೇ ಪದೇ ಪದೇ ಮಗುವಿನ ಹೃದಯ ಸ್ತಬ್ಧವಾಗುತ್ತಿರುವ ಬಗ್ಗೆ ವೈದರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಬಳಿಕ ವೈದರು ಪ್ರಯತ್ನ ಮಾಡುವುದಾಗಿಯೂ ಭರವಸೆ ನೀಡಿದರೂ ಮಗುವಿನ ಪ್ರಾಣ ಉಳಿಯುವ ಬಗ್ಗೆ ಸಂಶಯ ವ್ಯಕ್ಯಪಡಿಸಿದ್ದರು‌. ಮಗುವಿನ ಪರಿಸ್ಥಿತಿ ಕಂಡ ಕುಟುಂಬಸ್ಥರು ಕಂಗಾಲಾಗಿ ಹೋಗಿದ್ದರು‌.

ಅಷ್ಟರಲ್ಲಿ ಅಸ್ಪತ್ರೆ ಬಳಿಯಿದ್ದ ಓರ್ವ ವ್ಯಕ್ತಿ ಕೊರಗಜ್ಜ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸುವಂತೆ ಹೇಳಿದ ಹಿನ್ನಲೆಯಲ್ಲಿ ಮಗುವಿನ ಹೆತ್ತವರು ಇಂದ್ರಾಳಿ ,ಎಂಜಿಎಂ ಹಾಸ್ಟೆಲ್ ಬಳಿಯಿರುವ ಕೊರಗಜ್ಜನ ಕ್ಷೇತ್ರಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿ ಗಂಧ ಪ್ರಸಾದ ಪಡೆದು ತೆರಳಿದ್ದರು.

ಕ್ರಮೇಣ ಗಂಭೀರ ಸ್ಥಿತಿಯಲ್ಲಿದ್ದ ಪುಟ್ಟ ಕಂದಮ್ಮನ ಅರೋಗ್ಯ ದೀಢಿರಾಗಿ ಚೇತರಿಕೆ ಕಾಣಿಸಿಕೊಳ್ಳಲು ಪ್ರಾರಂಭಿಸಿತ್ತು. ವೈದರು ಕೂಡ ತಮ್ಮ ಪ್ರಯತ್ನಗಳನ್ನು ಮಾಡುವ ಮೂಲಕ ಹತ್ತೊಂಬತ್ತು ದಿನಗಳಲ್ಲಿ ಮಗು ಅರೋಗ್ಯವಾಗಿ ಹೆತ್ತಮ್ಮಳ ಕೈಯಲ್ಲಿ ಮತ್ತೆ ಬಂದು ಸೇರಿತು.

ಹೃದಯ ಬಡಿತವೇ ನಿಂತು ಹೋಯಿತು ಎಂದಿದ್ದ ಮಗು ಮತ್ತೆ ನಗುತ್ತಿರುವುದನ್ನು ಕಂಡು ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಇದಕ್ಕೆಲ್ಲ ನಂಬಿದ ಕೊರಗಜ್ಜ ಎನ್ನುವುದು ಕುಟುಂಬಸ್ಥರ ನಂಬಿಕೆ ಹೀಗಾಗಿ ಅಸ್ಪತ್ರೆಯಿಂದ ನೇರವಾಗಿ ಇಂದ್ರಾಳಿ ಬಳಿಯ ಕೊರಗಜ್ಜನ ಕ್ಷೇತ್ರಕ್ಕೆ ಬಂದು ಮಗುವನ್ನು ಕೊರಗಜ್ಜ ಸ್ವಾಮಿಯ ಮುಂದಿಟ್ಟು ಪ್ರಾರ್ಥನೆ ಸಲ್ಲಿಸಿ ಗಂಧ ಪ್ರಸಾದ ಪಡೆದುಕೊಂಡರು.

More from the blog

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...