Monday, April 15, 2024

ತೀವ್ರ ತಲೆನೋವಿನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು

ಮಂಚಿ: ತಲೆನೋವಿನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಮಂಚಿಯಲ್ಲಿ ನಡೆದಿದೆ.

ಮಂಚಿ ಗ್ರಾಮದ ಮಣ್ಣಗುಳಿ ನಿವಾಸಿ ರತಿ ಕುಲಾಲ್ ಅವರ ಮಗಳು ಭವ್ಯಾ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ.

ಭವ್ಯಾ ಅವಳು ಪುತ್ತೂರು ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕೆಲ ದಿನಗಳಿಂದ ತಲೆನೋವು ಎಂದು ಸ್ಥಳೀಯ ಖಾಸಗಿ ವೈದ್ಯರ ಬಳಿ ಪರೀಕ್ಷೆ ಮಾಡಿ ಮದ್ದು ಪಡೆಯುತ್ತಿದ್ದಳು. ಆದರೆ ಆದಿತ್ಯವಾರ ರಾತ್ರಿ ಸುಮಾರು 7 ಗಂಟೆ ವೇಳೆ ತಲೆ ನೋವು ಕಾಣಿಸಿಕೊಂಡು ವಾಂತಿ‌ಮಾಡಿದ್ದಳು.

ಆದ್ರೆ ರಾತ್ರಿ ವೇಳೆ ತಲೆ ನೋವು ಜಾಸ್ತಿ ಯಾಗಿ ವಾಂತಿ ಮಾಡುತ್ತಿದ್ದ ಭವ್ಯಾಳನ್ನು ಮುಂಜಾನೆ ಸುಮಾರು 4 ಗಂಟೆ ಯ ವೇಳೆಗೆ ಬಂಟ್ವಾಳ ಸರಕಾರಿ ‌ಆಸ್ಪತ್ರೆಗೆ ಕರೆದುಕೊಂಡು ಬಂದು ವೈದ್ಯರು ಪರೀಕ್ಷೆ ಮಾಡಿ ಹೆಚ್ಚಿನ ಚಿಕಿತ್ಸೆ ಗಾಗಿ‌ ಮಂಗಳೂರು ‌ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು.

ಆದರೆ ವೆನ್ಲಾಕ್ ಗೆ ಅಂಬ್ಯುಲೆನ್ಸ್ ನಲ್ಲಿ ಸಾಗಿಸಲಾಯಿತಾದರೂ ದಾರಿ ಮಧ್ಯೆ ಭವ್ಯಾ ಅವಳು ಮೃತಪಟ್ಟ ಬಗ್ಗೆ ಅಲ್ಲಿನ ವೈದ್ಯರು ತಿಳಿಸಿದ್ದಾರೆ.

ಇನ್ನು ವೈದ್ಯರ ಪೋಸ್ಟ್ ಮಾರ್ಟ್ಂ ರಿಪೋರ್ಟ್ ಬಳಿಕ ಸಾವಿನ ಕಾರಣ ತಿಳಿದುಬರಹುದು. ಬಂಟ್ವಾಳ ಗ್ರಾಮಾಂತರ ಎಸ್.ಐ ಹರೀಶ್ ವೆನ್ಲಾಕ್ ಆಸ್ಪತ್ರೆಗೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ರಾಜಕೀಯದ ಕನಸು ಕಂಡವನು ನಾನಲ್ಲ....

ಹಿರಿಯ ಮತ್ತು ಅಂಗವಿಕಲ ಮತದಾರರ ಮನೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ

ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 85 ವರ್ಷಕ್ಕೆ ಮೇಲ್ಪಟ್ಟ ಮತ್ತು ಶೇಕಡಾ 40 ಕ್ಕಿಂತ ಜಾಸ್ತಿ ಅಂಗವೈಕಲ್ಯತೆ ಹೊಂದಿರುವ ಮತದಾರರ ಮನೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸುವ...

ಉಳ್ಳಾಲದಲ್ಲಿ ರಾರಾಜಿಸಿದ ಕಾಂಗ್ರೆಸ್ ರೋಡ್ ಶೋ… ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿದ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಜನತೆ

ಉಳ್ಳಾಲ: ರೋಡ್ ಶೋ ಮೂಲಕ ನಡೆಸಿದ ಚುನಾವಣಾ ಪ್ರಚಾರ ಕಾರ್ಯ ಕಾಂಗ್ರೆಸ್'ಗೆ ಹೊಸ ಉತ್ಸಾಹ ತುಂಬುವಲ್ಲಿ ಸಫಲವಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದ್ದು, ಅಭೂತಪೂರ್ವ...

ಪುಣಚ: ನಿರ್ಮಾಣ ಹಂತದ ಸೇತುವೆ ಕುಸಿತ : 7 ಮಂದಿ ಕಾರ್ಮಿಕರಿಗೆ ಗಾಯ

ವಿಟ್ಲ: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಏಳು ಮಂದಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುಣಚ ಗ್ರಾಮದಲ್ಲಿ ನಡೆದಿದೆ. ಪುಣಚ ಗ್ರಾಮದ ಬರೆಂಜ – ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ಸೇತುವೆಯ ಕೊನೆಯ...