Saturday, April 13, 2024

ಒಂದೇ ಮನೆಯ ಇಬ್ಬರು ಮಕ್ಕಳು ಜ್ವರಕ್ಕೆ ಬಲಿ

ಮದ್ದಡ್ಕ: ಒಂದೇ ಮನೆಯ ಇಬ್ಬರು ಮಕ್ಕಳು ಜ್ವರದಿಂದಾಗಿ ಮೃತಪಟ್ಟಿರುವ ಘಟನೆ ಮದ್ದಡ್ಕ ಗ್ರಾಮದ ಲಾಡಿ ಎಂಬಲ್ಲಿ ಸಂಭವಿಸಿದೆ.

ಸಫ್ವಾನ್ ಮತ್ತು ಸಿನಾನ್ ಮೃತ ಮಕ್ಕಳು ಎಂದು ತಿಳಿದು ಬಂದಿದೆ.

ಮಕ್ಕಳಿಗೆ ಕೆಲವು ದಿನಗಳಿಂದ ಜ್ವರ ಕಾಣಿಸಿಕೊಂಡಿದ್ದು, ಸ್ಥಳೀಯವಾಗಿ ಚಿಕಿತ್ಸೆ ಪಡೆದು ಮಕ್ಕಳು ಮನೆಯಲ್ಲಿಯೇ ಇದ್ದರು. ಈ ನಡುವೆ ಇಬ್ಬರು ಮಕ್ಕಳಿಗೂ ಜ್ವರ ತೀವ್ರವಾಗಿದ್ದು ಬಳಿಕ ಇಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಒರ್ವ ಬಾಲಕ ನಿನ್ನೆ ರಾತ್ರಿ ಮೃತಪಟ್ಟಿದ್ದು ಇನ್ನೋರ್ವ ಬಾಲಕ ಇಂದು ಮೃತಪಟ್ಟಿದ್ದಾನೆ.

ಇನ್ನು ಮನೆಯ ಇಬ್ಬರು ಮಕ್ಕಳನ್ನೂ ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...