Thursday, April 18, 2024

ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಇಂದು ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ

ನವದೆಹಲಿ: ಬಲಿಪಾಡ್ಯಮಿಯ ದಿನವಾದ ಇಂದು ಕಾಂಗ್ರೆಸ್​ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಔಪಚಾರಿಕವಾಗಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಉತ್ತರಾಧಿಕಾರಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ಹಸ್ತಾಂತರಿಸುವ ಸಮಾರಂಭಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಭಾರೀ ಸಿದ್ಧತೆಗಳು ನಡೆದಿವೆ. ಕಳೆದ 24 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವ ವಹಿಸುವ ಮೊದಲ ಗಾಂಧಿಯೇತರ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಿದ್ದಾರೆ. ಪಕ್ಷದ ನಿರ್ಗಮಿತ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಖರ್ಗೆ ಅವರಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ.

137 ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್‌ ಪಕ್ಷದ ಸಂಕ್ರಮಣ ಕಾಲದಲ್ಲಿ ಹಾಗೂ 24 ವರ್ಷಗಳ ಬಳಿಕ ನೆಹರೂ-ಗಾಂಧಿ ಕುಟುಂಬದ ಹೊರಗಿನವರೊಬ್ಬರು ಪಕ್ಷದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ ಮಿಸ್ತ್ರಿ ಅವರು ಚುನಾವಣೆಯಲ್ಲಿ ಆಯ್ಕೆಯಾಗಿರುವ ಪ್ರಮಾಣಪತ್ರವನ್ನು ಖರ್ಗೆ ಅವರಿಗೆ ಹಸ್ತಾಂತರಿಸಲಿದ್ದಾರೆ.

 

More from the blog

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಹಿಮ್ಮುಖವಾಗಿ ಚಲಿಸಿದ ಪಿಕಪ್‌… ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...