Saturday, April 6, 2024

ಕರಾವಳಿಯಲ್ಲಿ ಕೆಂಗಣ್ಣು ಕಾಯಿಲೆ ಸಮಸ್ಯೆ : ವೈದ್ಯರಿಂದ ಎಚ್ಚರಿಕೆ

ಕರಾವಳಿಯ ಹಲವು ಕಡೆಗಳಲ್ಲಿ ಕೆಂಗಣ್ಣು ಕಾಯಿಲೆ ಸಮಸ್ಯೆ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ವೈದ್ಯರು ತಿಳಿಸಿದ್ದಾರೆ.

ಸುಮಾರು 10 ದಿನಗಳ ಹಿಂದೆ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡೀಲ್ ಪ್ರದೇಶದ ಹಲವಾರು ಮನೆಗಳ ಸದಸ್ಯರು ಈ ಕಾಯಿಲೆಗೆ ತುತ್ತಾಗಿದ್ದರು. ಪ್ರಸ್ತುತ ಸಮೀಪದ ಪೆರ್ಮುದೆ, ಎಕ್ಕಾರು ಗ್ರಾಮ ಪಂಚಾಯತ್, ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಗೂ ಹರಡಿದ್ದು, ಪರಿಸರದಲ್ಲಿ ಕಪ್ಪು ಕನ್ನಡಕ ಧರಿಸಿ ಓಡಾಡುವವರ ಸಂಖ್ಯೆ ಹೆಚ್ಚುತ್ತಿದೆ. ಬಾಧಿತರಲ್ಲಿ ವಿದ್ಯಾರ್ಥಿಗಳು, ವ್ಯಾಪಾರಿಗಳೂ ಇದ್ದು, ಅವರ ಮೂಲಕ ವೇಗವಾಗಿ ಇತರರಿಗೆ ಹರಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಬಗ್ಗೆ ಬಜಪೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಚಾರಿಸಿದಾಗ ಕೆಂಗಣ್ಣು ಸಮಸ್ಯೆ ಬಾಧಿಸಿರುವ ಬಗ್ಗೆ ಯಾವುದೇ ಮಾಹಿತಿಗಳು ಈ ತನಕ ಬಂದಿಲ್ಲ ಎಂದು ಹೇಳಿದ್ದಾರೆ. ಸೂಕ್ತ ಮುನ್ನೆಚ್ಚರಿಕೆ ವಹಿಸುವುದರಿಂದ ಈ ಕಾಯಿಲೆಯಿಂದ ದೂರ ಇರಬಹುದು ಎಂದು ಅವರು ತಿಳಿಸಿದ್ದಾರೆ.

ಮದ್ರಾಸ್ ಐ ಎಂದೂ ಕರೆಯಲ್ಪಡುವ ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್ ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ ಸೋಂಕು. ಕಣ್ಣಿನ ಬಿಳಿಭಾಗದ ಮೇಲ್ಮೆ ಮತ್ತು ಕಣ್ ರೆಪ್ಪೆಗಳ ಒಳಭಾಗ ಉರಿಯೂತಕ್ಕೆ ಈಡಾಗಿ ಕೆಂಪು ಅಥವಾ ಗುಲಾಬಿ ಬಣ್ಣ ಹೊಂದಿ ಊದಿಕೊಳ್ಳುವುದು ಇದರ ಲಕ್ಷಣ. ಇದು ಸುಲಭವಾಗಿ ಹರಡುವ ಸೋಂಕು. ಇದಕ್ಕೆ ನಿರ್ದಿಷ್ಟ ಚಿಕಿತ್ಸೆ ಇಲ್ಲ. ರೋಗ ಲಕ್ಷಣಗಳನ್ನು ಕಡಿಮೆ ಮಾಡಲು ಐ ಡ್ರಾಪ್ನಂತಹ ಔಷಧಗಳನ್ನು ವೈದ್ಯರು ಸೂಚಿಸುತ್ತಾರೆ.

 

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...