Monday, April 8, 2024

ಸ್ಥಳೀಯ ಯುವಕರ ತಂಡದಿಂದ ನಿರ್ಮಾಣಗೊಂಡ ಭಂಡಾರಿಬೆಟ್ಟು ನೂತನ ಪ್ರಯಾಣಿಕರ ತಂಗುದಾಣ ಉದ್ಘಾಟನೆ

ಬಂಟ್ವಾಳ: ಸಾರ್ವಜನಿಕರು ಮತ್ತು ಭಂಡಾರಿಬೆಟ್ಟು ಸ್ಥಳೀಯ ಯುವಕರ ತಂಡದಿಂದ ನಿರ್ಮಾಣಗೊಂಡ ನೂತನ ಪ್ರಯಾಣಿಕರ ತಂಗುದಾಣ ದೀಪಾವಳಿ ಯ ಬಲಿಪಾಡ್ಯದ ಶುಭದಿನದಂದು ಉದ್ಘಾಟನೆ ಮಾಡಲಾಯಿತು.

ನೂತನವಾಗಿ ನಿರ್ಮಾಣಗೊಂಡ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಗ್ಯಾರೆಜ್ ಮಾಲಕರ ಸಂಘದ ಕೋಶಾಧಿಕಾರಿ ಹಾಗೂ ಬಾಲಾಜಿ ಸರ್ವಿಸ್ ಸ್ಟೇಷನ್ ನ ಮಾಲಕ ಪ್ರಶಾಂತ್ ಭಂಡಾರಿಬೆಟ್ಟು ಅವರು ಉದ್ಘಾಟಿಸಿದರು.

ಬಿಸಿರೋಡು ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆದ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿದ್ಧ ಪ್ರಯಾಣಿಕರ ತಂಗುದಾಣಗಳನ್ನು ತೆರವು ಮಾಡಲಾಗಿತ್ತು. ಬಳಿಕ ಪ್ರಯಾಣಿಕರು ಬಸ್ ಗಾಗಿ ಮಳೆ ಹಾಗೂ ಬಿಸಿಲಿನಲ್ಲಿ ನಿಂತುಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿತ್ತು.

ಇನ್ನು ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಸ್ಥಳೀಯರ ಸಹಕಾರದಿಂದ ಪ್ರಯಾಣಿಕರ ಬಸ್ ತಂಗುದಾಣವನ್ನು ನಿರ್ಮಾಣ ಮಾಡಿ ಇಂದಿನಿಂದ ಪ್ರಯಾಣಿಕರ ಉಪಯೋಗಕ್ಕೆ ಮುಕ್ತಗೊಳಿಸಲಾಯಿತು ‌.

ಬಸ್ ನಿಲ್ದಾಣ ನಿರ್ಮಾಣದ ಮುತುವರ್ಜಿ ವಹಿಸಿದ ಮೋಹನ್ ದಾಸ್ ಭಂಡಾರಿಬೆಟ್ಟು ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರದ ತನಿಯಪ್ಪ ಬಂಗೇರ, ಸದಾಶಿವ ಆಚಾರ್ಯ, ಜಗನ್ನಾಥ್ ಮೈರನ್‌ಪಾದೆ, ಶಶಿಧರ್ ಬಾಳಿಗಾ, ರಾಮಸ್ವಾಮಿ ಭಂಡಾರಿಬೆಟ್ಟು, ಪುರ ಸಭೆ ಸದಸ್ಯ ಹರಿಪ್ರಸಾದ್ ಭಂಡಾರಿಬೆಟ್ಟು, ಸೇರಿದಂತೆ ಸ್ಥಳೀಯ ಯುವಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

More from the blog

ಬಂಟ್ವಾಳದ ಕುದ್ಕೋಳಿ: ಹೊತ್ತಿ ಉರಿದ ಡಸ್ಟರ್ ಕಾರು

ಬಂಟ್ವಾಳ: ಬಂಟ್ವಾಳ- ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಇಂದು ಬೆಳಗ್ಗೆ (ಸೋಮವಾರ) ನಡೆದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಬಳಿಕ ಸ್ಥಳೀಯರು ಹಾಗೂ ಬಂಟ್ವಾಳ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಮಿತಿ ಮೀರಿದ ತಾಪಮಾನ : ಖಡಕ್​ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳವಾಗುತ್ತಿದ್ದು ಮುಂದಿನ 14 ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್​...

ಮನೆಯ ಮಹಡಿಯಿಂದ ಬಿದ್ದು ಬಾಲಕ ಸಾವು

ಬಂಟ್ವಾಳ: ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಎ.‌ ೧ರ ಮುಂಜಾನೆ ನಡೆದಿದೆ. ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್(೧೫) ಮೃತಪಟ್ಟ ಬಾಲಕ. ಆತ ಮನೆಯಲ್ಲಿ ದೊಡ್ಡಮ್ಮನ...