Thursday, April 11, 2024

ಯುವ ವೇದಿಕೆ ಪೆರಾಜೆ ಇದರ ವತಿಯಿಂದ ಸಾಮರಸ್ಯ ದೀಪಾವಳಿ ಕಾರ್ಯಕ್ರಮ ತುಡರ್

ಯುವ ವೇದಿಕೆ ಪೆರಾಜೆ ಇದರ ವತಿಯಿಂದ ಪೆರಾಜೆ ಗ್ರಾಮದ ಕೊಂಕಣಪದವು ಭಾಗದಲ್ಲಿ ವಿಶೇಷವಾಗಿ ಸಾಮರಸ್ಯ ದೀಪಾವಳಿ ಕಾರ್ಯಕ್ರಮ ತುಡರ್ ಹಮ್ಮಿಕೊಳ್ಳಲಾಗಿತ್ತು.

ಅಲ್ಲಿನ ಪರಿಸರ ಹಿಂದೂ ಬಾಂಧ ವರನ್ನು ಒಟ್ಟು ಸೇರಿಸಿ ಭಾರತ ಮಾತೆಗೆ ಪುಷ್ಪಾರ್ಚನೆ ಗೈದು ಭಜನಾ ಸಂಕೀರ್ತನೆ ಮಾಡಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರು ಮಾಣಿ ಸುಬ್ರಹ್ಮಣ್ಯ ತುಡರ್ ಕಾರ್ಯಕ್ರಮದ ಹಿನ್ನೆಲೆ ಮತ್ತು ಇಂದಿನ ಪ್ರಸ್ತುತತೆ ಬಗ್ಗೆ ಜಾಗೃತಿ ಮೂಡಿಸಿದರು. ನಂತರ ಮನೆ ಮಂದಿಯೊಂದಿಗೆ ಪಟಾಕಿ ಸಿಡಿಸಿ, ಸಿಹಿ ಹಂಚಿಕೊಂಡು ಸಂತೋಷದಿಂದ ದೀಪಾವಳಿ ಆಚರಿಸಲಾಯಿತು.

ಯುವ ವೇದಿಕೆ ಅಧ್ಯಕ್ಷ ಯತಿರಾಜ್ ಪೆರಾಜೆ, ಕಾರ್ಯದರ್ಶಿ ಜೀವನ್ ಮಠತ ಪಾಲು, ಸಂಚಾಲಕ ರಾಜಾರಾಮ್ ಕಡೂರ್, ಸಂಘಟನೆಯ ಪ್ರಮುಖರಾದ ಹರೀಶ್ ರೈ,ಉಮೇಶ್ ಎಸ್. ಪಿ, ವಿನಿತ್ ಶೆಟ್ಟಿ, ರವೀಂದ್ರ ,ವಿನೋದ್, ಬಾಲಕೃಷ್ಣ, ಸಂದೇಶ್ ,ಸಂದೀಪ್,ನಾಗೇಶ್, ಗಣೇಶ್ ,ಬಾಲಕೃಷ್ಣ ಗೌಡ,ಮನೋಜ್, ಬೇಬಿ,ಚೇತನ್, ಗಗನ್ ದೀಪ್,ಪ್ರಣವ್ ಮತ್ತಿತರರು ಉಪಸ್ಥಿತರಿದ್ದರು..

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...