Wednesday, April 10, 2024

ಬಂಟ್ವಾಳ ಮಂಡಲ ಬಿಜೆಪಿ ವತಿಯಿಂದ ಕಾರ್ಯಕರ್ತರ ವಿಶೇಷ ಕಾರ್ಯಕಾರಿಣಿ ಸಭೆ

ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ದ.ಕ ಜಿಲ್ಲೆಯ ಎಲ್ಲಾ 8 ಮಂದಿ ಶಾಸಕರನ್ನು ವಿಧಾನ ಸಭೆಗೆ ಆಯ್ಕೆಮಾಡಬೇಕು ಎಂಬ ನಿಟ್ಟಿನಲ್ಲಿ ರಾಜ್ಯದ ನಾಯಕರು ಪಕ್ಷ ಸಂಘಟನೆಯ ಕೆಲಸದಲ್ಲಿ ತೊಡಗಿಸಿಕೊಂಡಿದ್ದು, ಪಕ್ಷದ ಗೆಲುವಿಗಾಗಿ ಕಾರ್ಯಕರ್ತರ ಸಂಘಟನೆಯನ್ನು ಮಾಡಲಾಗುತ್ತಿದೆ ಎಂದು ಶಾಸಕ‌ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು  ಹೇಳಿದರು.

ಅವರು ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ ಬಂಟ್ವಾಳ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೇಸ್ ಟೂಲ್ ಕಿಟ್ ಎಂಬಂತೆ ಅಪಪ್ರಚಾರದಲ್ಲಿ ತೊಡಗಿದೆ. ಆದರೆ ಅಪಪ್ರಚಾರಕ್ಕೆ ಬಲಿ ಬೀಳದೆ ಕಾರ್ಯಕರ್ತರು ಕೆಲಸ ಮಾಡಿದರೆ ಬಿಜೆಪಿಗೆ ಗೆಲುವು ಶತಃಸಿದ್ದ, ಕ್ಷೇತ್ರದಲ್ಲಿ ನಡೆದ ಅಭಿವೃದ್ಧಿಯ ಜೊತೆಗೆ , ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕಾಗಿದೆ ಎಂದು ಹೇಳಿದರು.

ಬಂಟ್ವಾಳ ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿ, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಸುದೀರ್ ಶೆಟ್ಟಿ ಕಣ್ಣೂರು, ಕೊರಗಪ್ಪ ನಾಯ್ಕ್, ರಾಮ್ ದಾಸ ಬಂಟ್ವಾಳ, ಹರಿಕೃಷ್ಣ ಬಂಟ್ವಾಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬಂಟ್ವಾಳ ‌ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಸ್ವಾಗತಿಸಿ, ಕಾರ್ಯದರ್ಶಿ ಡೊಂಬಯ್ಯ ಅರಳ ಕಾರ್ಯಕಮ ನಿರೂಪಿಸಿದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...