Thursday, April 11, 2024

ಸುರತ್ಕಲ್ ಟೋಲ್ ಗೇಟ್ ಸುತ್ತ ಸೆಕ್ಷನ್ 144 ಜಾರಿ

ಮಂಗಳೂರು: ನಗರ ಹೊರವಲಯದ ಸುರತ್ಕಲ್ ಠಾಣಾ ವ್ಯಾಪ್ತಿಯ ಎನ್.ಐ.ಟಿ.ಕೆ. ಟೋಲ್ ಪ್ಲಾಜಾದಲ್ಲಿ ಅಹೋರಾತ್ರಿ ಧರಣಿಗೆ ಸಿದ್ಧತೆ ನಡೆಸಿರುವಾಗಲೇ ಟೋಲ್ ಗೇಟ್ ನ ಸುತ್ತ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

ಅಕ್ಟೋಬರ್ 28ರಿಂದ ನವಂಬರ್ 3ರ ಸಂಜೆ 6 ಗಂಟೆಯ ತನಕ ಸುರತ್ಕಲ್ ಪೊಲೀಸ್ ಠಾಣೆಯ ಟೋಲ್ ಪ್ಲಾಜಾದ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಸೆಕ್ಷನ್ ಜಾರಿಯಲ್ಲಿರುವ ಭಾಗದಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಘೋಷಣೆಗಳನ್ನು ಕೂಗುವುದು, ಭಿತ್ತಿ ಪತ್ರ ಪ್ರದರ್ಶನ, ಶಸ್ತ್ರಗಳನ್ನು ಕೊಂಡೊಯ್ಯುವುದು, ಪಟಾಕಿ ಸಿಡಿಸುವುದು, ಕಲ್ಲೆಸೆತ ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಅಲ್ಲದೆ, ಅಧಿಕಾರಿಗಳ ವಿರುದ್ಧ ಅವಾಚ್ಯ ಭಾಷಣ, ಘೋಷಣೆಗಳು, ಮೆರವಣಿಗೆ, ಜಾಥಾ, ರಸ್ತೆ ತಡೆ ಕೂಡ ನಡೆಸಲು ಅವಕಾಶವಿಲ್ಲ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಹೊರಡಿಸಿರುವ ನಿಷೇಧಾಜ್ಞೆಯ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...