Monday, April 8, 2024

ಕುಕ್ಕೆಯಲ್ಲಿ ಡಾ.ಪ್ರಭಾಕರ ಶಿಶಿಲರ ಕಾದಂಬರಿ ಚಿದಗ್ನಿ ಲೋಕಾರ್ಪಣೆಗೊಳಿಸಿ ವಿದ್ವಾಂಸ ಲಕ್ಷ್ಮೀಶ ತೋಳ್ಪಾಡಿ ಅಭಿಮತ

ಸುಬ್ರಹ್ಮಣ್ಯ: ಕೃತಿಗಳ ಮೂಲಕ ಆಧ್ಯಾತ್ಮಿಕ ಪ್ರಭೆಯನ್ನು ಬೆಳಗಿಸುವುದು ಶ್ರೇಷ್ಠ ಕಾರ್ಯ. ಇದರಿಂದ ಜನತೆಯು ಪ್ರಾಚೀನತೆಯ ರೂಡಿ ಸಂಪ್ರದಾಯ ಗಳನ್ನು ಅರಿಯಲು ಪೂರಕವಾಗುತ್ತದೆ. ಪುಸ್ತಕಗಳನ್ನು ಓದುವುದು ಜ್ಞಾನ ಮತ್ತು ಮಾನಸಿಕ ಸಂತಸಕ್ಕೆ ಪೂರಕ. ವಿದ್ಯಾರ್ಥಿಗಳಿಗೆ ಎಳವೆಯಲ್ಲಿಯೇ ಸಾಹಿತ್ಯಾಸಕ್ತಿ ಬೆಳೆಯುವಂತೆ ಮಾಡಬೇಕು. ಇದರಿಂದ ಓದುವಿಕೆ ಮತ್ತು ಜ್ಞಾನಾರ್ಜನೆಯ ಹವ್ಯಾಸ ವೃದ್ದಿಯಾಗುತ್ತದೆ ಎಂದು ಕನ್ನಡದ ಹಿರಿಯ ವಿದ್ವಾಂಸ ಲಕ್ಷ್ಮೀಶ ತೋಳ್ಪಾಡಿ ಹೇಳಿದರು.

ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ, ಜೇಸಿಐ ಸುಬ್ರಹ್ಮಣ್ಯ ಕುಕ್ಕೆ ಶ್ರೀ, ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಸುಬ್ರಹ್ಮಣ್ಯ ದ ಎಸ್ ಎಸ್ ಪಿಯು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಡಾ.ಪ್ರಭಾಕರ ಶಿಶಿಲರ ವಿಶಿಷ್ಟ ಕಾದಂಬರಿ ಚದಗ್ನಿ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಸಾಹಿತ್ಯವು ಜೀವನದ ಆಗುಹೋಗುಗಳನ್ನು ಮತ್ತು ಅನುಭವಗಳನ್ನು ಬಿತ್ತರಿಸುವ ಮಾದ್ಯಮ. ಅನುಭವಗಳಿಂದ ಇತರರಿಗೆ ಪ್ರಯೋಜನವಾಗುತ್ತದೆ. ಸಾಹಿತ್ಯ ಕ್ಷೇತ್ರ ಮತ್ತು ಪುಸ್ತಕಗಳು ನಮ್ಮ ಜೀವನದ ಸುಗಮತೆಗೆ ದಾರಿದೀಪಗಳಾಗಿವೆ. ಆದುದರಿಂದ ಪುಸ್ತಕಗಳನ್ನು ಹೆಚ್ಚು ಹೆಚ್ಚು ಓದುವತ್ತ ಗಮನ ನೀಡುವುದು ಉತ್ತಮ. ಪುಸ್ತಕಗಳು ಸದಾ ಸಂಪತ್ತುಗಳು ಅವುಗಳನ್ನು ಶೇಖರಿಸುವುದು ನಮ್ಮ ದಿನಚರಿಯಾಗಬೇಕು ಎಂದರು.

ಬಾಕ್ಸ್ ವೈಚಾರಿಕ ಬದುಕಿನಿಂದ ಜೀವನ ಪಾವನ. ಯುವ ವಿದ್ಯಾರ್ಥಿಗಳಲ್ಲಿ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಜ್ಞಾನದ ಅಭ್ಯುದಯಕ್ಕೆ ಸಾಹಿತ್ಯ ಪ್ರಧಾನ. ಅನುಭವದ ಆಧಾರದಲ್ಲಿ ನಿರ್ಮಿತ ಸಾಹಿತ್ಯಗಳು ಬದುಕಿನಲ್ಲಿ ನೈತಿಕ ಮೌಲ್ಯಗಳನ್ನು ಹೆಚ್ಚಿಸುತ್ತದೆ.ಸಾಹಿತ್ಯದ ನೀತಿ ಸಂಪನ್ನತೆಯ ಜ್ಞಾನವನ್ನು ಸರ್ವರೂ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಹೇಳಿದರು.

ಸಾಹಿತಿ ಡಾ.ಪ್ರಭಾಕರ ಶಿಶಿಲ, ಕಾಲೇಜಿನ ಪ್ರಾಚಾರ್ಯ ಸೋಮಶೇಖರ ನಾಯಕ್, ಜೇಸಿಐ ಸುಬ್ರಹ್ಮಣ್ಯ ಕುಕ್ಕೆಶ್ರೀ ಯ ಅಧ್ಯಕ್ಷ ದೀಪಕ್ ನಂಬಿಯಾರ್, ರೋಟರಿ ಕ್ಲಬ್ ಅಧ್ಯಕ್ಷ ಗೋಪಾಲ್ ಎಣ್ಣೆಮಜಲು, ಕಾರ್ಯದರ್ಶಿ ರವಿ ಕಕ್ಕೆಪದವು, ಉಪನ್ಯಾಸಕಿಯರಾದ ಜಯಶ್ರೀ. ವಿ.ದಂಬೆಕೋಡಿ, ರೇಖಾರಾಣಿ ಸೋಮಶೇಖರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಸಾಹಿತಿ, ಬರಹಗಾರ ಹಾಗೂ ಯಕ್ಷಗಾನ ಕಲಾವಿದ ಡಾ.ಪ್ರಭಾಕರ ಶಿಶಿಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...