Wednesday, April 10, 2024

ದ್ವಿಚಕ್ರ ವಾಹನ ಸ್ಕಿಡ್ : ಸಹಸವಾರ ಮೃತ್ಯು

ದ್ವಿಚಕ್ರ ವಾಹನ ಸ್ಕಿಡ್ ಆಗಿ ರಸ್ತೆ ಬಿದ್ದ ಪರಿಣಾಮ ಸವಾರ ಸಣ್ಣ ಪುಟ್ಟ ಗಾಯಗೊಂಡು, ಸಹಸವಾರ ಮೃತಪಟ್ಟ ಘಟನೆ ದಾಸಕೋಡಿ ಎಂಬಲ್ಲಿ ನಡೆದಿದೆ.

ಪಾಣೆಮಂಗಳೂರು ನಿವಾಸಿ ಅಬ್ದುಲ್ ಖಾದರ್ (64), ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ.

ಪುತ್ತೂರಿನಿಂದ ಪಾಣೆಮಂಗಳೂರು ಮನೆಗೆ ಬರುವ ವೇಳೆ ಈ ಅಪಘಾತ ನಡೆದಿದೆ. ಅಬ್ದುಲ್ ಖಾದರ್ ಅವರು ಲೈನ್ ಸೇಲ್ ಬಟ್ಟೆ ವ್ಯಾಪಾರಿಯಾಗಿದ್ದು, ಸ್ನೇಹಿತ ನ ಜೊತೆ ಸ್ಕೂಟರ್ ನಲ್ಲಿ ಹಿಂಬದಿ ಕುಳಿತು ಕೊಂಡು ಬರುವ ವೇಳೆ ಸೂರಿಕುಮೇರು ಸಮೀಪದ ದಾಸಕೋಡಿ ಎಂಬಲ್ಲಿ ಸ್ಕಿಡ್ ಆಗಿ ರಸ್ತೆಗೆ ಬಿದ್ದು ತಲೆಗೆ ಗಂಭೀರ ವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇನ್ನು ಈ ಕುರಿತು ಮೆಲ್ಕಾರ್ ಟ್ರಾಫಿಕ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...