Wednesday, April 10, 2024

ಹಸುಗೂಸನ್ನು ಬಾವಿಗೆ ಎಸೆದು ಕೊಂದ ತಾಯಿ

ಸುಬ್ರಹ್ಮಣ್ಯ: ಕೆಲ ದಿನಗಳ ಹಿಂದೆ ಜನಿಸಿದ ಗಂಡು ಮಗುವೊಂದನ್ನು ತಾಯಿ ಬಾವಿಗೆ ಎಸೆದು ಕೊಂದಿರುವ ಹೃದಯ ವಿದ್ರಾಹಕ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೂತ್ಕುಂಜ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.

ಪಂಜ ಸಮೀಪದ ಕೂತ್ಕುಂಜ ಗ್ರಾಮದ ಬಸ್ತಿಕಾಡು ಪವಿತ್ರ ಮಗುವನ್ನು ಕೊಂದಿರುವ ಆರೋಪಿ ಎಂದು ಗುರುತಿಸಲಾಗಿದೆ.

10 ದಿನಗಳ ಹಿಂದೆ ಪವಿತ್ರ ಗಂಡು ಮಗುವಿಗೆ ಜನ್ಮ ನೀಡಿದ್ದರು ಎನ್ನಲಾಗಿದೆ. ಬಳಿಕದಲ್ಲಿ ಅವರು ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಇತ್ತೀಚೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಶನಿವಾರ ಮನೆಯಲ್ಲಿ ಯಾರು ಇಲ್ಲದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.

ಪವಿತ್ರಾಳು ಸುಮಾರು 4 ವರ್ಷದ ಹಿಂದೆ ಬೆಂಗಳೂರು ಮೂಲದ ಹರೀಶ್ ಎಂಬವರನ್ನು ವಿವಾಹವಾಗಿ ನಂತರ ಅವರೊಳಗೆ ಅನ್ಯೋನತೆ ಇಲ್ಲದೇ ಇದ್ದುದರಿಂದ ಆತನಿಗೆ ವಿಚ್ಚೇದನ ನೀಡಿ ಬಳಿಕ ತುಮಕೂರು ಜಿಲ್ಲೆ ಶಿರ ತಾಲೂಕಿನ ಮಣಿಕಂಠ ಎಂಬಾತನನ್ನು ಸುಮಾರು ಒಂದು ವರ್ಷದ ಹಿಂದೆ ವಿವಾಹ ಆಗಿದ್ದು, ಸುಮಾರು 2 ತಿಂಗಳು ಗಂಡನೊಂದಿಗೆ ಇದ್ದು, ನಂತರ ಆಕೆಗೆ ಆಸೌಖ್ಯದಿಂದ ಇದ್ದುದರಿಂದ ತಾಯಿ ಮನೆಗೆ ಬಂದಿದ್ದು, ಆಕೆಯು ಗರ್ಭವತಿಯಾಗಿದ್ದು, ಅ.10ರಂದು ಪವಿತ್ರಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಗಂಡು ಮಗು ನನಗೆ ಇಷ್ಟವಿಲ್ಲದಿದ್ದರು ಹುಟ್ಟಿರುತ್ತದೆ. ಈ ಗಂಡು ಮಗು ನನಗೆ ಬೇಡ ಎಂದು ಹೇಳಿ ಮಗುವನ್ನು ಎತ್ತಿಕೊಂಡು ಮನೆಯ ಎದುರಿನ ಬಾವಿಗೆ ಎಸೆದಿರುತ್ತಾಳೆ. ನಂತರ ಆಕೆಯು ರೂಮಿನ ಒಳಗಡೆ ಓಡಿ ಹೋಗಿದ್ದು, ಕೂಡಲೇ ಇತರರಿಗೆ ಮಾಹಿತಿ ತಿಳಿದು ಬಾವಿಗೆ ಇಳಿದು, ಮಗುವನ್ನು ತೆಗೆದು ಮೇಲಕ್ಕೆ ಎತ್ತಿ ಪಂಜ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಮಗು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಪವಿತ್ರಾ ಗರ್ಬಿಣಿ ಆದಾಗ ಅವಳಿಗೆ ಹೆಣ್ಣು ಮಗು ಆಗ ಬೇಕೆಂಬ ಆಸೆ ಇದ್ದು, ಅವಳ ಇಷ್ಟ ನೇರವೆರದೇ ಇದ್ದುದರಿಂದ ಹುಟ್ಟಿದ ಗಂಡು ಮಗುವನ್ನು ಆಕೆಯು ಬಾವಿಗೆ ಎಸೆದು ಕೊಲೆ ಮಾಡಿದ್ದಾರೆ ಎಂದು ಸುಬ್ರಹ್ಮಣ್ಯ ಠಾಣೆಗೆ ನೀಡಲಾದ ದೂರಿನಲ್ಲಿ ತಿಳಿಸಲಾಗಿದೆ.

ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...