Wednesday, April 10, 2024

ಬ್ಯಾಂಕಿಂಗ್ ಸಾಕ್ಷರತೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ

ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕಾ ಹಾಗೂ ಯುಎನ್‌ಡಿಪಿ ಸಹಯೋಗದಲ್ಲಿ ಬ್ಯಾಂಕಿಂಗ್ ಸಾಕ್ಷರತೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಅನುಷಾ, Financial Literacy Counsellor ಇವರು ವಿದ್ಯಾರ್ಥಿಗಳಿಗೆ ಬ್ಯಾಂಕಿನ ಸಾಕ್ಷರತೆ, ಡಿಜಿಟಲ್ ಬ್ಯಾಂಕಿಂಗ್, ಖಾತೆ ತೆರೆಯುವುದು ಮತ್ತು ಅದರ ಉಪಯೋಗ, ಸೈಬರ್ ಅಪಾಯ, ಉನ್ನತ ಶಿಕ್ಷಣಕ್ಕೆ ನೀಡುವ ಸಾಲ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಈ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಡಾ.ಶ್ರೀನಿವಾಸ ಇವರು ವಿದ್ಯಾರ್ಥಿಗಳಿಗೆ ಬ್ಯಾಂಕ್‌ಗಳು ನೀಡುವ ವಿವಿಧ ರೀತಿಯ ಸಾಲ ಸೌಲಭ್ಯಗಳು ಉನ್ನತ ಶಿಕ್ಷಣವನ್ನು ಪಡೆಯಲು ಉಪಯುಕ್ತವಾಗಿವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಡಾ.ಗಿರೀಶ್ ಭಟ್ ಎ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳು, ಸಹಾಯಕ ಪ್ರಾಧ್ಯಾಪಕರುಗಳಾದ ಡಾ.ಸುಂದ್ರೇಶ ಎನ್, ಹನುಮಂತಯ್ಯ ಜಿ.ಹೆಚ್, ವಿನಯ್ ಎಂ.ಎಸ್, ಉಪನ್ಯಾಸಕರಾದ ಯಶೋಧ ಉಪಸ್ಥಿತರಿದ್ದರು.
ಭವ್ಯ ದ್ವಿತೀಯ ಬಿಕಾಂ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು.

ದೀಕ್ಷಾ ತೃತೀಯ ಬಿಕಾಂ ನಿರೂಪಿಸಿದ ಕಾರ್ಯಕ್ರಮದಲ್ಲಿ ಸಚಿನ್ ತೃತೀಯ ಬಿಎ ಇವರು ಸ್ವಾಗತಿಸಿದರು. ಚರಣ್ಯ ತೃತೀಯ ಬಿಕಾಂ ವಂದಿಸಿದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...