Wednesday, April 17, 2024

ಉಳ್ಳಾಲ ವಿಧಾನ ಸಭಾ ಕ್ಷೇತ್ರದಲ್ಲಿ ಸಮಗ್ರವಾಗಿ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಿದ್ದೇನೆ- ಯು.ಟಿ.ಖಾದರ್

ಬಂಟ್ವಾಳ: ಶಿಕ್ಷಣ, ಆರೋಗ್ಯ, ಕುಡಿಯುವ ನೀರು ರಸ್ತೆ ಹೀಗೆ ಮಂಗಳೂರು ಉಳ್ಳಾಲ ವಿಧಾನ ಸಭಾ ಕ್ಷೇತ್ರದ ಲ್ಲಿ ಸಮಗ್ರವಾಗಿ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಿದ್ದೇನೆ ಎಂದು ಶಾಸಕ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿದರು.

ಅವರು ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಬಹುತೇಕ ಗ್ರಾ.ಪಂ.ವ್ಯಾಪ್ತಿಯಲ್ಲಿ ಹೊಸ ಹೈಸ್ಕೂಲ್ ಗಳ ನಿರ್ಮಾಣಗೊಂಡಿದ್ದು ಶೈಕ್ಷಣಿಕ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಪುದು ಪ್ರಾಥಮಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಕೆಲಸ ಅಂತಿಮತದಲ್ಲಿದ್ದು, ಸರಕಾರಕ್ಕೆ ಶಿಪಾರಸು ಮಾಡಿದ್ದೇನೆ ಎಂದು ತಿಳಿಸಿದರು.

ಅಂತಿಮ ಹಂತದಲ್ಲಿರುವ ಕ್ಷೇತ್ರದ ಎಲ್ಲಾ ರಸ್ತೆ ಕಾಮಗಾರಿಯನ್ನು ಕನಿಷ್ಠ ಮೂರು ತಿಂಗಳಲ್ಲಿ ಮುಗಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಸ್ತೆ ದುರಸ್ತಿ ಕಾಮಗಾರಿಯನ್ನು ಶೀಘ್ರವಾಗಿ ಮಾಡಬೇಕು, ಜೊತೆಗೆ ಮುಂದಿನ 15 ದಿನಗಳೊಳಗೆ ಗುಂಡಿ ಮುಚ್ಚಿ ವ ಕೆಲಸ ನಡೆಯಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ತಿಳಿಸಿದರು.

ರಸ್ತೆ ದುರಸ್ತಿ ಕಾರ್ಯವನ್ನು ಸಮರ್ಪಕವಾಗಿ ಮಾಡಲು ಅನುದಾನ ಬಿಡುಗಡೆ ಮಾಡದೆ ನಿರ್ಲಕ್ಷ್ಯ ವಹಿಸದ ರಾಜ್ಯ ಸರಕಾರದ ಕ್ರಮ ಖಂಡನೀಯ ಎಂದು ಹೇಳಿದರು.

ಅನೇಕ ಜೀವಕ್ಕೆ ತೊಂದರೆಯಾಗಿರುವ, ರಸ್ತೆ ದುರಸ್ತಿ ಗಾಗಿ ಶಾಸಕರು ಧರಣಿ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಹೇಳಿದರು.

ಸಜೀಪದಿಂದ ತುಂಬೆ ಸಂಪರ್ಕದ ಸೇತುವೆ ನಿರ್ಮಾಣ ಕ್ಕೆ ರೂ. 20 ಕೋಟಿಯ ಪ್ರಸ್ತಾವನೆ ಸಲ್ಲಿಸಿದ್ದೆ,ಆದರೆ ಕೆಲವೊಂದು ಕಾರಣಗಳಿಂದಾಗಿ ಬಾಕಿಯಾಗಿದ್ದು, ಮುಂದಿನ ದಿನಗಳಲ್ಲಿ ಯೋಜನೆಯನ್ನು ಮಂಜೂರು ಮಾಡುವ ವಿಶ್ವಾಸ ಇದೆ ಎಂದು ಹೇಳಿದರು.

240 ಕೋಟಿ ವೆಚ್ಚದಲ್ಲಿ ಮಂಗಳೂರು ಸಮಗ್ರ ಕುಡಿಯುವ ನೀರಿನ ಎರಡನೇ ಹಂತದ ಯೋಜನೆ ಕಾಮಗಾರಿ ಸಿದ್ದವಾಗಿದೆ ಎಂದು ತಿಳಿಸಿದರು.

ಪ್ರಮುಖರಾದ ಪ್ರಕಾಶ್ ಶೆಟ್ಟಿ ತುಂಬೆ, ಮಮತ ಗಟ್ಟಿ, ಪದ್ಮನಾಭ ನರಿಂಗಾಣ, ಚಂದ್ರಹಾಸ ಕರ್ಕೇರ ಪೂಜಾರಿ, ನಾಸೀರ್, ರಝಾಕ್ ಕುಕ್ಕಾಜೆ, ಅರುಣ್ ಡಿಸೋಜ, ಮತ್ತಿತರರ ಪ್ರಮುಖ ರು ಉಪಸ್ಥಿತರಿದ್ದರು.

More from the blog

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ...

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.