Thursday, April 11, 2024

ಬಂಟ್ವಾಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿವೃತ್ತ ವಿಸ್ತರಣಾಧಿಕಾರಿ ಷಣ್ಮುಖ ಶಿವಣ್ಣ ಕನ್ನವರ್ ನಿಧನ

ಬಂಟ್ವಾಳ: ಬಂಟ್ವಾಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿವೃತ್ತ ವಿಸ್ತರಣಾಧಿಕಾರಿ ಷಣ್ಮುಖ ಶಿವಣ್ಣ ಕನ್ನವರ್ ಅವರು ಅಸೌಖ್ಯದಿಂದ ಇಂದು ನಿಧನ ಹೊಂದಿದ್ದಾರೆ.

ಮೂಲತಃ ಬಾಗಲಕೋಟೆ ಜಿಲ್ಲೆಯ ಜಮಖಂಡಿಯವರಾದ ಅವರು ಬಿ.ಸಿ.ರೋಡು ಕೈಕುಂಜೆಯಲ್ಲಿ ವಾಸವಾಗಿದ್ದರು. ಇಲಾಖೆಯಲ್ಲಿ 40 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಬಳಿಕ ವಾಮದಪದವು ವಿದ್ಯಾರ್ಥಿ ನಿಲಯದಲ್ಲಿ ವಾರ್ಡನ್ ಆಗಿಯೂ ಸೇವೆ ಸಲ್ಲಿಸಿದ್ದರು. ಅವರ ಪತ್ನಿ ದಾಕ್ಷಾಯಿಣಿ ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

More from the blog

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...