Saturday, April 20, 2024

ಫ್ರೆಂಡ್ಸ್ ಕುಕ್ಕಾಜೆ ಇದರ ವತಿಯಿಂದ 55 ಕೆ ಜಿ ವಿಭಾಗದ ಪುರುಷರ ಹೊನಲುಬೆಳಕಿನ ಕಬಡ್ಡಿ ಪಂದ್ಯಾಟ

ಮಂಚಿ: ಫ್ರೆಂಡ್ಸ್ ಕುಕ್ಕಾಜೆ ಇದರ ವತಿಯಿಂದ ಕುಕ್ಕಾಜೆ ಪತ್ತುಮುಡಿ ಬಿ ವಿ ಕಾರಂತ ಬಸ್ ತಂಗುದಾಣದ ಮುಂಭಾಗದ ಕ್ರೀಡಾಂಗಣದಲ್ಲಿ 55 ಕೆ ಜಿ ವಿಭಾಗದ ಪುರುಷರ ಹೊನಲುಬೆಳಕಿನ ಕಬಡ್ಡಿ ಪಂದ್ಯಾಟವು ನಡೆಯಿತು.

ಜಿಲ್ಲೆಯ 33 ತಂಡಗಳು ಪಾಲ್ಗೊಂಡ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಇರಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಬ್ದುಲ್ ರಝಕ್ ಕುಕ್ಕಾಜೆ, ಮಂಚಿ ಗ್ರಾಮ ಪಂಚಾಯತ್ ಸದಸ್ಯರಾದ ಜಿ ಎಂ ಇಬ್ರಾಹಿಂ, ಮೊಹಮ್ಮದ್ ಕಾಪಿಕಾಡು, ಗಣ್ಯರಾದ ಮುಸ್ತಾಫಾ ಕುಕ್ಕಾಜೆ, ವಿಜಯ್, ಸಿದ್ದೀಕ್ ಕುಕ್ಕಾಜೆ ಇನ್ನಿತರ ಹಲವು ಗಣ್ಯರು ಪಾಲ್ಗೊಂಡಿದ್ದರು.

ಖಲೀಲ್ ಕಾಪಿಕಾಡು, ಶಾಫಿ ಕುಕ್ಕಾಜೆ, ಆಬಿದ್ ಕುಕ್ಕಾಜೆ ತೀರ್ಪುಗಾರರಾಗಿ ಸಹಕರಿಸಿದರು.

ನಝಿರ್ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಲ್ಲಿಸಿದರು.

ಪ್ರಥಮ ಸ್ಥಾನ ಬಿ ಕೆ ಬಾಯ್ಸ್ ಬಂಗಾರ್ಕೊಡಿ ಬೋಳಂತುರು ದ್ವಿತೀಯ ಸ್ಥಾನ ಭಾಗ್ಯಲಕ್ಷ್ಮಿ ಮೂರ್ಜೆ, ತೃತೀಯ ಸ್ಥಾನ ಸ್ಟಾರ್ ಫ್ರೆಂಡ್ಸ್ ಮಂಜನಾಡಿ, ಚತುರ್ಥ ಸ್ಥಾನವನ್ನು ನವಯುಗ ಕುಕ್ಕಾಜೆ ತಂಡ ಗೆದ್ದುಕೊಂಡಿತು.

More from the blog

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ರವರು ದಿನಾಂಕ 19-04-2024 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಭೇಟಿ ನೀಡಿದರು. ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಿಗೆ...

ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಸಾವು

ಮಂಗಳೂರು: ಟ್ಯಾಂಕರ್ ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್ ಎನ್ನಲಾಗಿದೆ ಯಾದವ್ ರಸ್ತೆ ಬದಿ‌ ನಡೆದುಕೊಂಡು...

ಏ.21ರಂದು ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ

ಮತದಾರರನ್ನು ಮತಗಟ್ಟೆಗೆ ಸೆಳೆಯುವ ಸಲುವಾಗಿ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದರಂತೆ ಎ.21ರಂದು ಎಲ್ಲಾ ಬೂತ್ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಹಮ್ಮಿಕೊಂಡಿದ್ದು, ಬಂಟ್ವಾಳ...