Wednesday, April 10, 2024

ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣ : ಅಂತರರಾಜ್ಯ ಕಳ್ಳ ಅರೆಸ್ಟ್

ಬಂಟ್ವಾಳ ತಾಲೂಕಿನಲ್ಲಿ ಕಳೆದ ಒಂದು ವರ್ಷದ ಹಿಂದೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರರಾಜ್ಯ ಕಳ್ಳನೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೋಲಿಸರ ತಂಡ ಬಂಧಿಸಿದ್ದಾರೆ.

ಕಣ್ಣೂರು ನಿವಾಸಿ ಮಹಮ್ಮದ್ ಅಲಕ್ಕೋಡು ಎಂಬಾತನನ್ನು ಕಾಸರಗೋಡು ಎಂಬಲ್ಲಿ ಬಂಧಿಸಲಾಗಿದೆ.

ಬಂಧಿತ ಆರೋಪಿಯಿಂದ ಸುಮಾರು 4 .50 ಲಕ್ಷದ ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ.

2021 ರ ಜನವರಿ 30 ರಂದು ಅಜಿಲಮೊಗರು ನಿವಾಸಿ ಖಾದರ್ ಅವರ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು ಕಾರ್ಯಚರಣೆ ನಡೆಸಿ ಆರೋಪಿಯನ್ನು ಕಾಸರಗೋಡಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿ ದ್ದಾರೆ.

ಇನ್ನು ಮಹಮ್ಮದ್ ಅಲಕ್ಕೋಡು ಕುಖ್ಯಾತ ಕಳ್ಳನಾಗಿದ್ದು, ಈತನ ಮೇಲೆ ಕೇರಳ ರಾಜ್ಯದಲ್ಲಿ 200 ಕ್ಕೂ ಅಧಿಕ ಕಳವು ಪ್ರಕರಣ ದಾಖಲಾಗಿದೆ. ಜೊತೆಗೆ ದ.ಕ.ಜಿಲ್ಲೆಯಲ್ಲಿ ಇದೀಗ ಕಳ್ಳತನ ಅಕೌಂಟ್ ಓಪನ್ ಮಾಡಿದ್ದು, ಹತ್ತುಕ್ಕೂ ಅಧಿಕ ಕಡೆಗಳಲ್ಲಿ ಕಳ್ಳತನ ಮಾಡಿರುವ ಬಗ್ಗೆ ಪೋಲೀಸರಿಗೆ ತನಿಖೆ ವೇಳೆ ಬಯಲಾಗಿದೆ.

ಸದ್ಯ ಬಂಧಿತನ ವಿಚಾರಣೆ ಯ ಬಳಿಕ ಇನ್ನಷ್ಟು ಕಳವು ಪ್ರಕರಣದ ಮಾಹಿತಿ ಲಭ್ಯವಾಗುವ ಸಾಧ್ಯತೆ ಗಳಿವೆ.

ಎಸ್. ಪಿ.ಹೃಷಿಕೇಶ್ ಸೋನಾವಣೆ ಅವರ ನಿರ್ದೇಶನದ ಲ್ಲಿ ಬಂಟ್ವಾಳ ಡಿ.ವೈ.ಎಸ್.ಪಿ.ಪ್ರತಾಪ್ ಸಿಂಗ್ ಥೋರಾಟ್ ಅವರ ಮಾರ್ಗದರ್ಶನ ದಲ್ಲಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಹಾಗೂ ಎಸ್ .ಐ.ಹರೀಶ್ ನೇತೃತ್ವದ ತಂಡ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

 

More from the blog

ದ.ಕ. ಉಡುಪಿ ಜಿಲ್ಲೆಗೆ ಇಂದು ರಜೆ ಘೋಷಣೆ : ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ

ಮಂಗಳೂರು: ಈದ್ ಉಲ್-ಫಿತರ್ ಪ್ರಯುಕ್ತ ಏಪ್ರಿಲ್ 10ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದು, ರಾಜ್ಯ ಸರ್ಕಾರದ...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...

ಬಂಟ್ವಾಳ ತಾಲೂಕಿನಾದ್ಯಂತ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

ಬಂಟ್ವಾಳ ತಾಲೂಕಿನಾದ್ಯಂತ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ ನಡೆಯಿತು. ಬುಡೋಳಿ ಏನಾಜೆ ಬಿಲಾಲ್ ಮಸ್ಜಿದ್ ಏನಾಜೆ ಬುಡೋಳಿಯಲ್ಲಿ ಮಸೀದಿ ಖತೀಬರಾದ ಅಬ್ದುಲ್ ಮಜೀದ್ ದಾರಿಮೀ ಉಸ್ತಾದ್ ಜುಮ್ಮಾ ನೇತೃತ್ವ ವಹಿಸಿ ಈದ್ ಸಂದೇಶವನ್ನು...

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...