Monday, April 8, 2024

ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರ ಉತ್ಥಾನ ರಾಷ್ಟ್ರೀಯ ಸಂಸ್ಕಾರ ಬಾಲಿಕಾ ಶಿಬಿರ

ಬಂಟ್ವಾಳ: ಶ್ರೀರಾಮ ಪದವಿ ಪೂರ್ವ ಕಾಲೇಜು, ಕಲ್ಲಡ್ಕ ಇಲ್ಲಿನ ವಿದ್ಯಾರ್ಥಿನಿಯರ
ಉತ್ಥಾನ ರಾಷ್ಟ್ರೀಯ ಸಂಸ್ಕಾರ ಬಾಲಿಕಾ ಶಿಬಿರದ ಉದ್ಘಾಟನ ಸಮಾರಂಭ ಅ.09 ರಂದು ನಡೆಯಿತು.

ಧರ್ಮ-ಸಂಸ್ಕಾರವನ್ನು ತೊರೆದರೆ ಭಾರತವೊಂದು ಬರಡು ಭೂಮಿಯಾಗುವುದು, ತನ್ನ ಸತ್ವವನ್ನು ಕಳೆದುಕೊಳ್ಳುವುದು. ದೇಶಕ್ಕೆ ಚೈತನ್ಯ ಮೂಡಲು ಸಂಸ್ಕಾರದ ಅಗತ್ಯವಿದೆ. ಸಂಸ್ಕಾರವನ್ನು ಕೊಡುವುದು ಶಿಕ್ಷಣ ಸಂಸ್ಥೆಗಳ ಮೂಲಕ ಮಾತ್ರ ಸಾಧ್ಯ, ಈ ಶಿಬಿರವನ್ನು ಸಂಪೂರ್ಣವಾಗಿ ಸದುಪಯೋಗ ಪಡಿಸಿಕೊಳ್ಳಿ ಎಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಂಸತ ಮಾಧವ ಪ್ರಾಸ್ತಾವಿಕ
ಮಾತುಗಳನ್ನಾಡಿದರು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ಕನ್ನಡ ವಿಭಾಗ ಬೆಸೆಂಟ್ ವಿಮೆನ್ಸ್ ಕಾಲೇಜು ನಿವೃತ್ತ ಮುಖ್ಯಸ್ಥರು, ಡಾ.ಮೀನಾಕ್ಷಿ ರಾಮಚಂದ್ರ ಅವರು, ಸ್ತ್ರೀ ಶಕ್ತಿಯ ಪರಿಕಲ್ಪನೆಯನ್ನು ಗೋ-ಪದ್ಯದ ಹೋಲಿಕೆಯೊಂದಿಗೆ ಬಹಳ ಅಚ್ಚುಕಟ್ಟಾಗಿ ವಿವರಿಸುತ್ತಾ, ಆಕೆಯಲ್ಲಿ ಹುದುಗಿರುವ ಸಾಮರ್ಥ್ಯ ಯಾವುದೇ ಪುರುಷನಿಗೂ ಕಡಿಮೆಯಿಲ್ಲ, ಅಂತೆಯೇ ಸನಾತನ ಧರ್ಮದ ಉಳಿವು ಮಾತೃತ್ವದಿಂದ ಮಾತ್ರ ಸಾಧ್ಯ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಇವರು ವಹಿಸಿದರು. ಶಿಬಿರಾಧಿಕಾರಿಯಾದ ಪ್ರಮಿತಾ, ಆಡಳಿತ ಮಂಡಳಿಯ ಸದಸ್ಯೆ  ಲಕ್ಷ್ಮೀ ರಘುರಾಜ್, ಕಮಲಾ ಪ್ರಭಾಕರ್ ಭಟ್, ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಪ್ರಾಚಾರ್ಯ ವಸಂತ ಬಲ್ಲಾಳ್, ಶ್ರೀರಾಮ ಪದವಿ ವಿದ್ಯಾಲಯದ ಪ್ರಾಚಾರ್ಯ ಕೃಷ್ಣಪ್ರಸಾದ್ ಕೆ ಎನ್ ಉಪಸ್ಥಿತರಿದ್ದರು.

ಶಿಬಿರದ ಕಾರ್ಯವಾಹಿಕ ಶೋಭಾ ವಿ ಶೆಟ್ಟಿ ಸ್ವಾಗತಿಸಿ, ಚೈತನ್ಯ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...