Saturday, April 6, 2024

ಕಲ್ಲಡ್ಕ ಫ್ಲೈಓವರ್ ಕಾಮಗಾರಿ ಸ್ಥಳದಲ್ಲಿ ಅನಾಹುತ

ಬಂಟ್ವಾಳ: ಕಲ್ಲಡ್ಕದಲ್ಲಿ ನಡೆಯುತ್ತಿರುವ ಬಿ.ಸಿ ರೋಡು-ಹಾಸನ ಚತುಷ್ಪಥ ಹೆದ್ದಾರಿಯ ಫ್ಲೈಓವರ್ ಕಾಮಗಾರಿ ಸ್ಥಳದಲ್ಲಿ ಅನಾಹುತವೊಂದು‌ ನಡೆದಿದ್ದು, ಅದೃಷ್ಡವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಫೈ ಓವರ್ ಗಾಗಿ ಪಿಲ್ಲರ್ ನಿರ್ಮಾಣ ಕಾಮಗಾರಿ ಭರದಿಂದ ನಡೆಯುತ್ತಿದ್ದು, ಪಿಲ್ಲರ್ ನಿರ್ಮಾಣಕ್ಕಾಗಿ ಕಬ್ಬಿಣದ ಸಲಾಕೆಗಳನ್ನು ಜೋಡಿಸುವ ಕಾರ್ಯ ನಡೆಯುತ್ತಿದ್ದ ಸ್ಥಳದಲ್ಲಿ ಅನಾಹುತ ನಡೆದಿದೆ. ಕಬ್ಬಿಣದ ಸಲಾಕೆಗಳು ಸಂಪೂರ್ಣ ಭಾಗಿ ರಸ್ತೆಗೆ ಬಿದ್ದಿದ್ದು, ಘಟನೆ ವೇಳೆ ಯಾವುದೇ ವಾಹನ ಸಂಚಾರ ಇಲ್ಲದ ಹಿನ್ನೆಲೆಯಲ್ಲಿ ಭಾರೀ ಅನಾಹುತ ತಪ್ಪಿದಂತಾಗಿದೆ.

ತೀವ್ರತರದ ಮಳೆಯಿಂದಾಗಿ ಕಳೆದ ಕೆಲ ತಿಂಗಳಿನಿಂದ ಫೈಓವರ್ ನಿರ್ಮಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಮೊದಲೇ ವಾಹನ ಸವಾರರು ಹಾಗೂ ಸಾರ್ವಜನಿಕರು ಹಲವು ರೀತಿಯಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಕಾಮಗಾರಿ ತೀರಾ ಅವೈಜ್ಞಾನಿಕ ರೀತಿಯಲ್ಲಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿರುವ ನಡುವೆ ಈ ಘಟನೆ‌ ನಡೆದಿರುವುದು ಸ್ಥಳೀಯರಲ್ಲಿ ಕಾಮಗಾರಿ‌ ಗುಣಮಟ್ಟದ ಬಗ್ಗೆ ಅನುಮಾನ‌ಮೂಡಿಸಿದೆ.

More from the blog

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...