Sunday, April 7, 2024

ಡಿ.23 ರಿಂದ ಜ. 1ರ ವರೆಗೆ ತಣ್ಣೀರು ಬಾವಿ ಕಡಲ ತಡಿಯಲ್ಲಿ ಕರಾವಳಿ ಉತ್ಸವ

ಮಂಗಳೂರು:  ಡಿಸೆಂಬರ್ 23 ರಿಂದ ಜನವರಿ 01 ರವರೆಗೆ ನಗರದ ತಣ್ಣೀರು ಬಾವಿ ಕಡಲ ತಡಿಯಲ್ಲಿ ಕರಾವಳಿ ಉತ್ಸವವನ್ನು ಹಮ್ಮಿಕೊಳ್ಳಲಾಗುವುದು, ಅದಕ್ಕೆ ಅಗತ್ಯವಿರುವ ಉಪ ಸಮಿತಿಗಳ ರಚನೆ ಹಾಗೂ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕಂತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಹೇಳಿದ್ದಾರೆ.

ಈ ಕುರಿತು ಅವರು ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರಾವಳಿ ಉತ್ಸವಕ್ಕೆ ಸರ್ಕಾರದ ಅನುದಾನ, ಖಾಸಗಿ ಪ್ರಾಯೋಜಕತ್ವ, ಮೆರವಣಿಗೆ ಸಾಂಸ್ಕಂತಿಕ ಕಾರ್ಯಕ್ರಮಗಳು, ವಸ್ತು ಪ್ರದರ್ಶನ, ಬೀಚ್ ಉತ್ಸವ, ರಿವರ್ ಫೆಸ್ಟಿವಲ್ ಆಯೋಜನೆ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಮಾಹಿತಿ ಸಂಗ್ರಹಿಸದರು.

ಇನ್ನು ಕರಾವಳಿ ಉತ್ಸವವನ್ನು ಪ್ರಮುಖವಾಗಿ ಸಾಂಸ್ಕಂತಿಕವಾಗಿ ಹಾಗೂ ಪ್ರವಾಸೋದ್ಯಮಕ್ಕೆ ಪೂರಕವಾಗಿ ಆಯೋಜನೆ ಮಾಡಲಾಗುವುದು, ಈ ಬಗ್ಗೆ ಉಪ ಸಮಿತಿಗಳಲ್ಲಿ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗುವುದು, ಈ ಉತ್ಸವ ಯಶಸ್ವಿಯಾಗಲು ಈ ಹಿಂದೆ ಕಾರ್ಯಕ್ರಮದಲ್ಲಿ ಭಾಗವಹಿಸಿದವರ ಅನುಭವ ಹಾಗೂ ಸಲಹೆ ಅಗತ್ಯ, ಸಹಕರಿಸುವಂತೆ ಕೋರಿದರು. ತಣ್ಣೀರು ಬಾವಿ ಕಡಲ ತೀರ ಪ್ರಧಾನ ವೇದಿಕೆಯನ್ನಾಗಿ ಕಾರ್ಯಕ್ರಮ ರೂಪಿಸಲಾಗುವುದು,ಅಲ್ಲಿಯೇ ಆಹಾರ ಮೇಳವನ್ನು ಆಯೋಜಿಸಲಾಗುವುದು, ಕದ್ರಿ ಪಾರ್ಕ್ ಸೇರಿದಂತೆ ಇತರೆ ಪ್ರಮುಖ ಸ್ಥಳಗಳಲ್ಲಿ ವೇದಿಕೆಗಳಿಗೆ ಅವಕಾಶ ನೀಡಲಾಗುವುದು ಎಂದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಮಾತನಾಡಿ, ಕೋವಿಡ್ ಸೋಂಕಿನಿಂದಾಗಿ ಕಳೆದ ಎರಡು ವರ್ಷಗಳಿಂದ ಕರಾವಳಿ ಉತ್ಸವವನ್ನು ಹಮ್ಮಿಕೊಂಡಿಲ್ಲ, ಸಾಂಸ್ಕಂತಿಕ ವೇದಿಕೆಯಲ್ಲಿ ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ನೀಡಲಾಗುವುದು ಎಂದರು.

ಸಭೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಕಾನೂನು ಮತ್ತು ಸುವ್ಯವಸ್ಥೆ ಡಿ.ಸಿ.ಪಿ. ಅಂಶುಕುಮಾರ್ ಹಾಗೂ ಇತರರು ವೇದಿಕೆಯಲ್ಲಿದ್ದರು. ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ರಾಜೇಶ್ ಸ್ವಾಗತಿಸಿದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...