ಸಂಜೆ ೬.೪೫ಕ್ಕೆ ನಡೆಯುವ ಸಭಾ ಕಾರ್ಯಕ್ರಮವನ್ನು ರಾಜ್ಯ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಉದ್ಘಾಟಿಸಲಿದ್ದು, ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಧರ್ಮಾಽಕಾರಿ ಅತೀ ವಂ| ಡಾ| ಅಲೋಶಿಯಸ್ ಪಾವ್ಲ್ ಡಿಸೋಜ ಆಶೀವರ್ಚನ ನೀಡಲಿದ್ದಾರೆ. ಗೋವಾದ ಮಾಜಿ ಮುಖ್ಯಮಂತ್ರಿ, ಸಂಸದ ಫ್ರಾನ್ಸಿಸ್ಕೊ ಸರ್ಡಿನ್ಹಾ ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದು, ರಾಜ್ಯ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್‌ಕುಮಾರ್ ಜಾಲತಾಣ ಬಿಡುಗಡೆಗೊಳಿಸಲಿದ್ದಾರೆ.
ಸೊಸೈಟಿಯ ಅಧ್ಯಕ್ಷ ಜೀವನ್ ಲೋಯ್ಡ್ ಪಿಂಟೊ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯಅತಿಥಿಗಳಾಗಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್.ರಾಜೇAದ್ರಕುಮಾರ್, ಶಾಸಕರಾದ ರಾಜೇಶ್ ನಾÊಕ್ ಉಳಿಪ್ಪಾಡಿಗುತ್ತು, ಯು.ಟಿ.ಖಾದರ್, ಹರೀಶ್ ಪೂಂಜ, ಮಾಜಿ ಸಚಿವ ಬಿ.ರಮಾನಾಥ ರೈ, ಮಂಗಳೂರು ಧರ್ಮಪ್ರಾಂತ್ಯದ ವಿಕಾರ್ ಜನರಲ್ ಅತೀ ವಂ| ಮ್ಯಾಕ್ಸಿಮ್ ನೊರೊನ್ಹಾ, ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಸ್ಥಾಪಕಾಧ್ಯಕ್ಷ ಲಿಗೋರಿ ಲೋಬೊ, ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಬಿ.ನಾಯಕ್, ಸಹಾಯಕ ಉಪನಿಬಂಧಕ ಸುಽÃರ್‌ಕುಮಾರ್ ಜೆ, ಮಂಗಳೂರು ಕಥೋಲಿಕ್ ಸಭಾ ಅಧ್ಯಕ್ಷ ಸ್ಟ್ಯಾನಿ ಲೋಬೊ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಜೆ ೫.೩೦ಕ್ಕೆ ಬಲೇ ತೆಲಿಪಾಲೆ ಖ್ಯಾತಿಯ ಉಮೇಶ್ ಮಿಜಾರ್ ಬಳಗದಿಂದ ಕಾಮಿಡಿ ಶೋ, ರಾತ್ರಿ ೯ಕ್ಕೆ ಇಕ್ಬಾಲ್ ಮತ್ತು ರೂಪ ಪ್ರಕಾಶ್ ಮಹಾದೇವನ್ ಬಳಗದಿಂದ ಸಂಗೀತ ರಸಮಂಜರಿ ನಡೆಯಲಿದೆ ಎಂದು ಸಿಇಒ ಸೆಲಿನ್ ಗ್ರೇಸಿ ಡಿಸೋಜ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
