Friday, April 5, 2024

ಬೆಳ್ಳಿ ಹಬ್ಬ ಸಂಭ್ರಮೋತ್ಸವದಲ್ಲಿರುವ ವಿಟ್ಲ ಬಿಲ್ಲವ ಸಂಘದ ಆಶ್ರಯದ ಕ್ರೀಡೋತ್ಸವ

ವಿಟ್ಲ: ಬೆಳ್ಳಿ ಹಬ್ಬ ಸಂಭ್ರಮೋತ್ಸವದಲ್ಲಿರುವ ವಿಟ್ಲ ಬಿಲ್ಲವ ಸಂಘದ ಆಶ್ರಯದಲ್ಲಿ ವಿಟ್ಲ ವಿಠಲ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಕ್ರೀಡೋತ್ಸವ ನಡೆಯಿತು.

ವಿಟ್ಲ ವಲಯ ಬಿಲ್ಲವ ಸಂಘದ ವ್ಯಾಪ್ತಿಗೆ ಬರುವ 14 ಗ್ರಾಮಗಳ ಸಮಾಜ ಬಾಂಧವರಿಗೆ ನಡೆದ ಕ್ರೀಡೋತ್ಸವವನ್ನು ಬೆಳ್ಳಿ ಸಂಭ್ರಮೋತ್ಸವ ಸಮಿತಿ ಅಧ್ಯಕ್ಷ ಡಾ.ಗೀತ ಪ್ರಕಾಶ್ ಕ್ರೀಡೋತ್ಸವವನ್ನು ಉದ್ಘಾಟಿಸಿದರು. ಬಳಿಕ ಪುರುಷ, ಮಹಿಳಾ ಹಾಗೂ ಮಕ್ಕಳ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು ನಡೆದವು.

ವಿಟ್ಲ ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಸಿ.ಹೆಚ್, ವಿಟ್ಲ ಯುವವಾಹಿನಿ ಘಟಕದ ಅಧ್ಯಕ್ಷ ಯಶವಂತ ನಿಡ್ಯ, ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ನಿಡ್ಯ, ಭಾರತೀಯ ಸೇನೆಯ ನಿವೃತ್ತ ಕ್ಯಾಪ್ಟನ್ ದಾಸಪ್ಪ ಪೂಜಾರಿ ನೆಕ್ಕಿಲಾರು, ಬಿಲ್ಲವ ಸಂಘದ ಪದಾಧಿಕಾರಿಗಳಾದ ಜಗದೀಶ್ ಪಾಣೆಮಜಲು, ಚಂದ್ರಹಾಸ ಸುವರ್ಣ, ರಮೇಶ್ ಆರ್.ಎಸ್, ರಾಘವ ಪೂಜಾರಿ, ಸಂಜೀವ ಪೂಜಾರಿ ಎಂ.ಎಸ್, ಬಿಲ್ಲವ ಮಹಿಳಾ ಘಟಕದ ಪದಾಧಿಕಾರಿಗಳು, ದೈಹಿಕ ಶಿಕ್ಷಣ ಶಿಕ್ಷಕರಾದ ವಿಶ್ವನಾಥ ರಾಥೋಡ್, ಪ್ರಕಾಶ್ ಬಳಂತಿಮೊಗರು, ಬೆಳ್ಳಿ ಹಬ್ಬ ಸಮಿತಿ ಕಾರ್ಯದರ್ಶಿ ರಾಜೇಶ್ ವಿಟ್ಲ, ರಾಷ್ಟ್ರೀಯ ಕಬಡ್ಡಿ ಕ್ರೀಡಾಳು ವಿಶ್ವರಾಜ್ ಸೇರಿದಂತೆ ಮೊದಲಾದವರು ಭಾಗವಹಿಸಿದ್ದರು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...