Friday, April 5, 2024

ಸಮಾಜ ಸೇವಾ ಸಹಕಾರಿ ಸಂಘದಿಂದ ಕುಲಾಲ ಸಮಾಜ ಸಂಘಟನೆಗೆ ನಿಧಿ ಸಮರ್ಪಣೆ

ಬಿ.ಸಿ.ರೋಡ್ : ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಇದರ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಅಮ್ಮೆಂಬಳ ಬಾಳಪ್ಪರ ಹುಟ್ಟುಹಬ್ಬದ ಶತಮಾನೋತ್ಸವ ಆಚರಣೆಯ ಪ್ರಯುಕ್ತ ಕುಲಾಲ ಸಮಾಜಕ್ಕೆ ಸಹಾಯ ನಿಧಿ ಸಮರ್ಪಣಾ ಕಾರ್ಯಕ್ರಮ ಇಂದು ಬಂಟ್ವಾಳ ಬೈಪಾಸ್‌ನ ಕೇಂದ್ರ ಕಚೇರಿಯಲ್ಲಿರುವ ಸಮಾಜ ಸೇವಾ ಸಹಕಾರಿ ಭವನದಲ್ಲಿ ನಡೆಯಿತು.

ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘ ಇದರ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಡಾ| ಅಮ್ಮೆಂಬಳ ಬಾಳಪ್ಪ ಹೆಸರಿನ ವಸತಿ ನಿಲಯದ ನಿರ್ಮಾಣಕ್ಕೆ ಒಂದು ಸೆಂಟ್ಸ್ ಜಾಗ ಖರೀದಿಗೆ ನಿಧಿ, ಬಂಟ್ವಾಳ ತಾಲೂಕು ಕುಲಾಲ ಸಂಘ ಇದರ ಮೇಲಂತಸ್ತಿನ ನೂತನ ಕಟ್ಟಡದ ಸಭಾಭವನದಲ್ಲಿ ಡಾ| ಅಮ್ಮೆಂಬಳ ಬಾಳಪ್ಪರ ವೇದಿಕೆ ನಿರ್ಮಾಣಕ್ಕೆ ನಿಧಿ, ಕುಲಾಲ ಸಂಘ ಮುಡಿಪು ಇದರ ಸಭಾಭವನಕ್ಕೆ ಡಾ| ಅಮ್ಮೆಂಬಳ ಬಾಳಪ್ಪ ಜನ್ಮಶತಾಬ್ದಿ ಕುಲಾಲ ಸಮುದಾಯ ಭವನಕ್ಕಾಗಿ ನಿಧಿಯನ್ನು ಆಯಾ ಸಂಘಟನೆ ಅಧ್ಯಕ್ಷರಿಗೆ ಹಸ್ತಾಂತರಿಸಲಾಯಿತು.

ಸಂಘದ ಅಧ್ಯಕ್ಷ ಸುರೇಶ್ ಕುಲಾಲ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಗಳಾಗಿ ಜಿಲ್ಲಾ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್, ಬಂಟ್ವಾಳ ತಾಲೂಕು ಕುಲಾಲ ಸಂಘದ ಅಧ್ಯಕ್ಷ ನಾರಾಯಣ ಸಿ. ಪೆರ್ನೆ, ಮುಡಿಪು ಕುಲಾಲ ಸಂಘದ ಅಧ್ಯಕ್ಷ ಪುಂಡಲೀಕಾಕ್ಷ, ನರಿಕೊಂಬು ಕುಲಾಲ ಸಂಘದ ಮಾಜಿ ಅಧ್ಯಕ್ಷ ಮಾಧವ ಕುಲಾಲ್, ಪುತ್ತೂರು ಕುಲಾಲ ಸಂಘದ ಅಧ್ಯಕ್ಷ ನವೀನ್ ಕುಲಾಲ್ ಪುತ್ತೂರು, ಜಿಲ್ಲಾ ಮಾತೃ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಜಲಜಾಕ್ಷಿ ಆಗಮಿಸಿದ್ದರು. ಸಭಾಕಾರ್ಯಕ್ರಮಕ್ಕೂ ಮೊದಲು ಅಮ್ಮೆಂಬಳ ಬಾಳಪ್ಪರವರ ಪುತ್ಥಳಿಗೆ ಮಾಲಾರ್ಪಣೆಗೈದು ನಂತರ ಸಭಾಕಾರ್ಯಕ್ರಮ ನಡೆಯಿತು.

ಮುಖ್ಯಕಾರ್ಯನಿರ್ವಹಣಾಧಿಕಾರಿ ಬೋಜ ಕುಲಾಲ್ ಪ್ರಸ್ತಾವನೆ ಮಾಡಿದರು. ಸಹಾಯಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ್ ಕಾರ್ಯಕ್ರಮ ನಿರೂಪಿಸಿದರು. ಸಹಕಾರಿ ಸಂಘದ ಉಪಾಧ್ಯಕ್ಷ ಪದ್ಮನಾಭ ಸ್ವಾಗತಿಸಿದರು. ಸಿಬ್ಬಂದಿ ಶಿವರಾಮ್ ಪ್ರಾರ್ಥನೆ ಮಾಡಿದರು. ನಿರ್ದೇಶಕ ಬಿ. ರಮೇಶ್ ಸಾಲ್ಯಾನ್ ಸಂಚಯಗಿರಿ ಧನ್ಯವಾದ ನೀಡಿದರು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...