Friday, April 5, 2024

ಬಿಸಿರೋಡು ಅಡ್ಡಹೊಳೆವರೆಗಿನ ಚತುಷ್ಪತ ಕಾಮಗಾರಿ ಅವಾಂತರದಿಂದ ಐದು ಗ್ರಾಮಗಳಿಗೆ ನೀರಿನ ಸಮಸ್ಯೆ : ಅಧಿಕಾರಿಗಳಿಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲು ಎಚ್ಚರಿಕೆ

ಬಿಸಿರೋಡು ಅಡ್ಡಹೊಳೆವರೆಗಿನ ಚತುಷ್ಪತ ಕಾಮಗಾರಿ ಅವಾಂತರದಿಂದ ಐದು ಗ್ರಾಮಗಳಿಗೆ ನೀರಿನ ಸಮಸ್ಯೆ ಉದ್ಭವಿಸಿದ್ದು, ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣ ಪರಿಹಾರ ಮಾಡದಿದ್ದರೆ ಅಧಿಕಾರಿಗಳನ್ನು ಬದಲಾವಣೆ ಮಾಡಬೇಕಾದೀತು ಎಂದು ಅಧಿಕಾರಿಗಳಿಗೆ ಸಂಸದ, ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲು ಎಚ್ಚರಿಕೆ ನೀಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಕುಡಿಯುವ ನೀರಿನ‌ ಪೈಪ್ ಗಳಿಗೆ ಹಾನಿಯಾಗಿದ್ದು, ಸುಮಾರು ಐದು ಗ್ರಾಮಗಳಿಗೆ ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿನ‌ ಸಮಸ್ಯೆ ಉದ್ಬವವಾದ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿ, ಎಚ್ಚರಿಕೆ ನೀಡಿದರು.

ಕುಡಿಯುವ ನೀರಿನ ಸಮಸ್ಯೆ ಜೊತೆ ಭೂ ಒತ್ತುವರಿ, ಗುಡ್ಡ ಅಗೆತ, ಮೆಸ್ಕಾಂ ಸಮಸ್ಯೆಗಳು ಬರದಂತೆ ಎಚ್ಚರಿಕೆ ವಹಿಸಬೇಕು, ಜೊತೆಗೆ ಪ್ರತಿ 15 ದಿನಗಳಿಗೊಮ್ಮೆ ಶಾಸಕರ ಜೊತೆ ಅಧಿಕಾರಿಗಳು ಹಾಗೂ ಗುತ್ತಿಗೆ ವಹಿಸಿಕೊಂಡ ಕಂಪೆನಿಯ ಸಿಬ್ಬಂದಿಗಳು ಸಭೆ ನಡೆಸಬೇಕು. ಗ್ರಾ.ಪಂ.ವ್ಯಾಪ್ತಿಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಗ್ರಾಮ ಮಟ್ಟದ ಅಧಿಕಾರಿಗಳ ಜೊತೆಯೂ ಸಭೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...