Thursday, April 11, 2024

ಅ.30 ರಂದು ನೂತನ ಶಾಲಾ ಕಟ್ಟಡವನ್ನು ಕಟೀಲು ಅನಂತ ಪದ್ಮನಾಭ ಅಸ್ರಣ್ಣರು ಉದ್ಘಾಟಿಸಲಿದ್ದಾರೆ-ಧರ್ಮೇಂದ್ರ ಗಣೇಶಪುರ

ಬಂಟ್ವಾಳ: ನೇತಾಜಿ‌ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬುಡೋಳಿ, ಜಾನಕಿ ಚಾರಿಟೇಬಲ್ ಟ್ರಸ್ಟ್ (ರಿ.) ಕಾಟಿಪಳ್ಳ, ವಿದ್ಯಾಭಿಮಾನಿಗಳ ಸಹಕಾರದೊಂದಿಗೆ ನೂತನ ಶಾಲಾ ಕಟ್ಟಡವನ್ನು ಅ.30 ರಂದು ಕಟೀಲು ಅನಂತ ಪದ್ಮನಾಭ ಅಸ್ರಣ್ಣರು ಉದ್ಘಾಟಿಸಲಿದ್ದಾರೆ ಎಂದು ಕಾಟಿಪಳ್ಳ ಜಾನಕಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಧರ್ಮೇಂದ್ರ ಗಣೇಶಪುರ ಅವರು ಹೇಳಿದರು.

ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ವಿಚಾರ ತಿಳಿಸಿದರು.

ಸುಮಾರು 50 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ನೂತನ ಶಾಲಾ ಕಟ್ಟಡದ ಉದ್ಘಾಟನೆ ನಡೆಯಲಿದ್ದು, ‌ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಆಶೀರ್ವನ ನೀಡಲಿದ್ದಾರೆ. ಕರಿಮಲೆ ಬಾಲಯೇಸು ದೇವಾಲಯದ ಧರ್ಮಗುರು ಲೀಯೋ ವೇಗಸ್ ಶುಭನುಡಿಯನ್ನು ಹೇಳಲಿದ್ದಾರೆ.

ಶಾಸಕ ರಾಜೇಶ್ ನಾಯ್ಕ್ ಅವರ ಅಧ್ಯಕ್ಷ ತೆಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಕಟ್ಟಡದ ಉದ್ಘಾಟನೆ ನಡೆಸಲಿದ್ದಾರೆ. ಇವರ ಜೊತೆ ಸಮಾಜದ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸಂಚಾಲಕ ಶ್ರೀಪತಿ ಭಟ್, ಮುಖ್ಯಗುರು ದೊಡ್ಡಪ್ಪ ಎಚ್, ಕಾರ್ಯಧ್ಯಕ್ಷ ಪ್ರಕಾಶ್ ಕುಮಾರ್ ಜೈನ್, ಪ್ರಧಾನ ಕಾರ್ಯದರ್ಶಿ ದೇವಪ್ಪ ಕುಲಾಲ್, ಉಪಾಧ್ಯಕ್ಷ ಕೆ.ಎನ್.ಶೇಖರ್ ಮತ್ತಿತರರು ಉಪಸ್ಥಿತರಿದ್ದರು.

More from the blog

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...