Wednesday, April 10, 2024

ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ತುಳು ನಾಟಕೋತ್ಸವಕ್ಕೆ ಚಾಲನೆ

ತುಳು ನಾಟಕ ಕಲಾವಿದರ ಒಕ್ಕೂಟದ ಬಂಟ್ವಾಳ ತಾಲೂಕು ಘಟಕ, ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ತುಳು ನಾಟಕೋತ್ಸವಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷ ದಯಾನಂದ ಕತ್ತಲಸಾರ್ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅದ್ಯಕ್ಷ ಎ.ಸಿ.ಭಂಡಾರಿ, ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ತಾಲೂಕು ಕಸಾಪ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ಅಧ್ಯಕ್ಷ ಕಿಶೋರ್ ಡಿ. ಶೆಟ್ಟಿ, ಜೇಸಿ ಬಂಟ್ವಾಳ ಅಧ್ಯಕ್ಷ ರೋಶನ್ ರೈ, ಉದ್ಯಮಿ ಲತೀಫ್ ಎಂ, ಬಂಟ್ವಾಳ ವರ್ತಕರ ಸಹಕಾರ ಸಂಘದ ಉಪಾಧ್ಯಕ್ಷ ಮಂಜುನಾಥ ರೈ ಸಾಲೆತ್ತೂರು, ಬಂಟ್ವಾಳ ತಾಲೂಕು ಶಾಮಿಯಾನ ಮಾಲೀಕರ ಸಂಘದ ಅಧ್ಯಕ್ಷ ಮಾಕ್ಸಿಂ ಸಿಕ್ವೇರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್, ತುಳುಕೂಟ ಬಂಟ್ವಾಳ ಅಧ್ಯಕ್ಷ ಸುದರ್ಶನ ಜೈನ್, ಉದ್ಯಮಿ ಭಾಸ್ಕರ ಅಜೆಕಲ ಉಪಸ್ಥಿತರಿದ್ದರು.

ಇದೇ ವೇಳೆ ಮಹಾಬಲ ದಾಸಕೋಡಿ ಅವರನ್ನು ಸನ್ಮಾನಿಸಲಾಯಿತು.

ಪ್ರಾಸ್ತಾವಿಕವಾಗಿ ಒಕ್ಕೂಟದ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ಮಾತನಾಡಿದರು. ಕಲಾವಿದ ಎಚ್.ಕೆ.ನಯನಾಡು ಕಾರ್ಯಕ್ರಮ ನಿರ್ವಹಿಸಿದರು. ಹಿರಿಯ ಕಲಾವಿದ ಮಂಜು ವಿಟ್ಲ ವಂದಿಸಿದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...